ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೂಡ್ನಾಕೂಡು, ಹನೂರು ಕೃಷ್ಣಮೂರ್ತಿಗೆ ಶಿವರಾಮ ಕಾರಂತ ಪ್ರಶಸ್ತಿ

Published 18 ಮೇ 2024, 19:10 IST
Last Updated 18 ಮೇ 2024, 19:10 IST
ಅಕ್ಷರ ಗಾತ್ರ

ಮೂಡುಬಿದಿರೆ (ದಕ್ಷಿಣ ಕನ್ನಡ): ಸಾಹಿತಿ ದಿ.ಶಿವರಾಮ ಕಾರಂತ ಅವರ ಹೆಸರಿನಲ್ಲಿ ಮೂಡುಬಿದಿರೆಯ ಶಿವರಾಮ ಕಾರಂತ ಪ್ರತಿಷ್ಠಾನ ನೀಡುವ ‘ಶಿವರಾಮ ಕಾರಂತ ಪ್ರಶಸ್ತಿ’ಗೆ ಸಾಧಕರನ್ನು ಆಯ್ಕೆಮಾಡಲಾಗಿದೆ.

ಲೇಖಕ ಬೆಂಗಳೂರಿನ ಚಿನ್ನಸ್ವಾಮಿ ಮೂಡ್ನಾಕೂಡು, ಜಾನಪದ ವಿದ್ವಾಂಸ ಮೈಸೂರಿನ ಪ್ರೊ.ಕೃಷ್ಣಮೂರ್ತಿ ಹನೂರು, ಕನ್ನಡದ ಕೀಲಿಮಣೆ ವಿನ್ಯಾಸ ಸಂಶೋಧಿಸಿ ಕನ್ನಡ ಭಾಷೆಗೆ ವಿಶಿಷ್ಟ ಕೊಡುಗೆ ನೀಡಿದ ಉಡುಪಿಯ ಕೆ.ಪಿ.ರಾವ್, ಹೆಗ್ಗೋಡಿನ ನೀನಾಸಂ ಸಂಸ್ಥೆಗೆ ಈ ವರ್ಷದ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷೆ ಜಯಶ್ರೀ ಅಮರನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ್ ಮಾವಿನಕುಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಡ್ನಾಕೂಡು ಚಿನ್ನಸ್ವಾಮಿ
ಮೂಡ್ನಾಕೂಡು ಚಿನ್ನಸ್ವಾಮಿ
ಕೆ.ಪಿ.ರಾವ್‌
ಕೆ.ಪಿ.ರಾವ್‌
ನೀನಾಸಂ
ನೀನಾಸಂ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT