ಮಂಗಳೂರು: ಈ ಸಾಲಿನ ಕರಾವಳಿ ಉತ್ಸವ ಕಾರ್ಯಕ್ರಮವನ್ನು ಡಿ. 19 ರಿಂದ 2026ರ ಜ.4ರವರೆಗೆ ನಡೆಸಲು ಉದ್ದೇಶಿಸಲಾಗಿದೆ. ಬೀಚ್ ಉತ್ಸವ, ಕಲಾ ಪರ್ಬ, ಚಿತ್ರ ಸಂತೆ, ಫಲಪುಷ್ಪ ಪ್ರದರ್ಶನ ಮತ್ತಿತರ ಕಾರ್ಯಕ್ರಮಗಳು ಈ ಸಲದ ಕರಾವಳಿ ಉತ್ಸವದ ವಿಶೇಷ ಆಕರ್ಷಣೆಯಾಗಲಿವೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಕರಾವಳಿ ಉತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಕರಾವಳಿ ಉತ್ಸವದಲ್ಲಿ ಜನಾಕರ್ಷಣೆಯ ಕಾರ್ಯಕ್ರಮಗಳಿಗೆ ಆದ್ಯತೆ ನೀಡಲಾಗುತ್ತದೆ. ಸಾಂಸ್ಕೃತಿಕ, ಚಿತ್ರಕಲೆ, ಸಾಹಸ ಹಾಗೂ ಪ್ರಾಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಕಾರ್ಯಕ್ರಮದ ರೂಪುರೇಷೆ ಹಾಗೂ ಅಗತ್ಯ ಸಿದ್ಧತೆಗಳ ಬಗ್ಗೆ ವಾರದೊಳಗೆ ವರದಿ ನೀಡಬೇಕು ಹಾಗೂ ಟೆಂಡರ್ ಪ್ರಕ್ರಿಯೆಯನ್ನು ತ್ವರಿತವಾಗಿ ಕೈಗೊಳ್ಳಬೇಕು’ ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.

‘ಜಿಲ್ಲೆಯ ಎಲ್ಲಾ ಪ್ರಮುಖ ಕಡಲ ಕಿನಾರೆಗಳಲ್ಲಿ ಪ್ರತ್ಯೇಕವಾಗಿ ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಕ್ರೀಡಾ ಕಾರ್ಯಕ್ರಮಗಳಿಗೂ ಪ್ರಾಮುಖ್ಯತೆ ನೀಡಲಾಗುತ್ತದೆ. ಪ್ರಮುಖವಾಗಿ ಬೀಚ್ ಫುಟ್ಬಾಲ್ ಮತ್ತು ವಾಲಿಬಾಲ್ಗಳಿಗೆ ಅವಕಾಶ ಕಲ್ಪಿಸಲಾಗುತ್ತದೆ’ ಎಂದು ಅವರು ತಿಳಿಸಿದರು.

ಲಾಲ್ಬಾಗ್ನ ಕರಾವಳಿ ಉತ್ಸವ ಮೈದಾನ, ಕದ್ರಿ ಉದ್ಯಾನ ಹಾಗೂ ಪ್ರಮುಖ ಕಡಲ ಕಿನಾರೆಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಬೈಕ್ ಮತ್ತು ಕಾರು ಪ್ರದರ್ಶನ, ಶ್ವಾನ ಪ್ರದರ್ಶನವನ್ನು ಈ ಸಲವೂ ಆಯೋಜಿಸಲಾಗುವುದು. ಕರಾವಳಿ ಉತ್ಸವದ ಅಂಗವಾಗಿ ಪಿಲಿಕುಳದಲ್ಲೂ ಕೆಲವು ಕಾರ್ಯಕ್ರಮಗಳನ್ನು ಏರ್ಪಡಿಸುವ ಬಗ್ಗೆ ಯೋಚಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಕೆ., ಡಿಸಿಪಿ ಮಿಥುನ್ ಎಚ್.ಎನ್, ಮಂಗಳೂರು ಉಪವಿಭಾಗಾಧಿಕಾರಿ ಮೀನಾಕ್ಷಿ ಆರ್ಯ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಸಂಘ ಸಂಸ್ಥೆ ಪ್ರತಿನಿಧಿಗಳು, ಮುಖಂಡರು ಭಾಗವಹಿಸಿದ್ದರು.

ಹಡಗು ವೀಕ್ಷಣೆಗೆ ಅವಕಾಶ? ‘ಕರಾವಳಿ ಉತ್ಸವದ ಅಂಗವಾಗಿ ಸಾರ್ವಜನಿಕರಿಗೆ ನವಮಂಗಳೂರು ಬಂದರಿನಲ್ಲಿ ಹಡಗು ವೀಕ್ಷಣೆ ಹಾಗೂ ಕರಾವಳಿ ರಕ್ಷಣಾ ಪಡೆಯ ನೌಕೆಗಳ ವೀಕ್ಷಣೆಗೆ ಅವಕಾಶ ನೀಡುವ ಕುರಿತು ಸಂಬಂಧಪಟ್ಟ ಪ್ರಾಧಿಕಾರದೊಂದಿಗೆ ಚರ್ಚಿಸಲಾಗುವುದು’ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಅವಧಿ ಕಡಿತ ನಿತ್ಯವೂ ಕಾರ್ಯಕ್ರಮ

2024–25ನೇ ಸಾಲಿನಲ್ಲಿ ಕರಾವಳಿ ಉತ್ಸವ ಪ್ರಯುಕ್ತ ಒಂದು ತಿಂಗಳ ಕಾಲ ವಸ್ತು ಪ್ರದರ್ಶನವನ್ನು ಹಾಗೂ ಪ್ರತಿ ವಾರಾಂತ್ಯದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕೆಲವು ಕಾರ್ಯಕ್ರಮಗಳಿಕೆ ಪ್ರೇಕ್ಷಕರ ಕೊರತೆ ಎದುರಾಗಿತ್ತು. ‘ಈ ಸಾಲಿನ ಉತ್ಸವದ ಅವಧಿಯನ್ನು 15 ದಿನಗಳಿಗೆ ಸೀಮಿತಗೊಳಿಸಲು ಹಾಗೂ ವಾರಾಂತ್ಯದ ಬದಲು ನಿತ್ಯವೂ ಕಾರ್ಯಕ್ರಮ ಏರ್ಪಡಿಸಲು ನಿರ್ಧರಿಸಲಾಗಿದೆ’ ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.