ಉಪ್ಪಿನಂಗಡಿ: ಕಾವಳಕಟ್ಟೆ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಬೆಳ್ತಂಗಡಿ ತಾಲ್ಲೂಕಿನ ಕರಾಯ ಮಹಾಲಿಂಗೇಶ್ವರ ದೇವಳದ ಬ್ರಹ್ಮಕಲಶೋತ್ಸದ ನಿಮಿತ್ತ ಏ.13ರಿಂದ 25ರವರೆಗೆ ದ್ವಾದಶ ಜ್ಯೋತಿರ್ಲಿಂಗ ದರ್ಶನ ಆಯೋಜಿಸಲಾಗಿದೆ ಎಂದು ಕಾವಳಕಟ್ಟೆ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸೇವಾರ್ಥಿ ಮಂಜುನಾಥ್ ತಿಳಿಸಿದರು.

ಉಪ್ಪಿನಂಗಡಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧ್ಯಾತ್ಮದ ಸವಿ ಉಣಿಸಲು ದ್ವಾದಶ ಜ್ಯೋತಿರ್ಲಿಂಗ ದರ್ಶನ ಎಂಬ ದೇಶದ ಪುರಾತನ ಹನ್ನೆರಡು ಜ್ಯೋತಿರ್ಲಿಂಗಗಳನ್ನು ಮೂಲ ಸ್ವರೂಪದ ಬಿಂಬದಂತೆ ದರ್ಶನದ ಅವಕಾಶ ಕಲ್ಪಿಸಲಾಗಿದೆ. ಸಹಸ್ರಲಿಂಗ ದರ್ಶನದ ಅವಕಾಶ, ಧ್ಯಾನ ಮಂದಿರದಲ್ಲಿ ದ್ಯಾನಕ್ಕೆ ಅವಕಾಶವನ್ನು ಉಚಿತವಾಗಿ ಒದಗಿಸಲಾಗಿದೆ. ರಾಜಯೋಗದ ಮೂಲಕ ವ್ಯಸನಮುಕ್ತ ಜೀವನ, ಒತ್ತಡ ಮುಕ್ತ ಜೀವನ, ಅಪನಂಬಿಕೆ ಮುಕ್ತ ಜೀವನವನ್ನು ಅನುಭವಿಸಲು ಮತ್ತು ಪರಮಾತ್ಮನ ಒಲವನ್ನು ಪಡೆಯಲು ಅವಕಾಶವನ್ನು ಒದಗಿಸಲಾಗುತ್ತಿದೆ ಎಂದರು.

ಕರಾಯ ಮಹಾಲಿಂಗೇಶ್ವರ ದೇವಾಲಯದ ಬಳಿ ವ್ಯವಸ್ಥೆಗೊಳಿಸಲಾದ ದರ್ಶನದ ಉದ್ಘಾಟನೆಯನ್ನು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಾಧಕಿಯರಾದ ಸರೋಜಾ, ಭಾನುಮತಿ ನೆರವೇರಿಸುವರು. ಉದ್ಘಾಟನಾ ಕಾರ್ಯಕ್ರಮದಲ್ಲಿ ಕರಾಯ ದೇವಳದ ಆಡಳಿತ ಮಂಡಳಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸಹಾ ಸೇವಾರ್ಥಿ ವಿಶ್ವನಾಥ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260413-29-1244747246

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.