ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಕಳ ಅಪಘಾತ: ಮೃತರು ಮತ್ತು ಗಾಯಾಳುಗಳ ಪೂರ್ಣ ವಿವರ

Last Updated 16 ಫೆಬ್ರುವರಿ 2020, 8:45 IST
ಅಕ್ಷರ ಗಾತ್ರ

ಉಡುಪಿ: ಕಾರ್ಕಳ ತಾಲ್ಲೂಕಿನ ಅಬ್ಬಾಸ್‌ ಕಟ್ಟಿಂಗೇರಿ ಬಳಿ ಶನಿವಾರ ಸಂಜೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಐವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

24 ಮಂದಿಗೆ ಕಾರ್ಕಳದ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಬ್ಬರು ಚಿಕಿತ್ಸೆ ಪಡೆದು ಡಿಸ್‌ಚಾರ್ಜ್‌ ಆಗಿದ್ದಾರೆ. ಅಪಘಾತದಲ್ಲಿ 9 ಮಂದಿ ಅಸುನೀಗಿದ್ದು, 6 ಜನರ ಮರಣೋತ್ತರ ಪರೀಕ್ಷೆ ನಡೆಸಿ ಶವಗಳನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ.

ಅಪಘಾತ ಸಂಬಂಧ ಡಿಬಿ ಟ್ರಾವೆಲ್ಸ್‌ನ ಬಸ್‌ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಅವಘಡದಲ್ಲಿ ಬಸ್‌ ಚಾಲಕ ಕೂಡ ಮೃತಪಟ್ಟಿದ್ದಾನೆ. ಶೃಂಗೇರಿ ಕಡೆಯಿಂದ ಮಾಳಮಾರ್ಗವಾಗಿ ಹೋಗುತ್ತಿದ್ದ ಬಸ್‌ ಚಾಲಕನ ಅಜಾರೂಕತೆಯಿಂದ ರಸ್ತೆ ಬಲಬದಿಯ ಬಂಡೆಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎಂದು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೃತರ ವಿವರ:ಆರ್.ಯೋಗೀಂದ್ರ (24) ಮೈಸೂರಿನ ಚಾಮುಂಡಿಬೆಟ್ಟ,ಇ.ವಿನುತಾ(28) ಶ್ರೀರಂಗಪಟ್ಟಣದ ಮೊಗೇರಳ್ಳಿ,ರಕ್ಷಿತಾ (27) ಮೈಸೂರಿನ ಬೋಗಾದಿ,ಅನುಜ್ಞಾ (26) ಮೈಸೂರಿನ ಜೆಎಸ್‌ಎಸ್‌ ಲೇಔಟ್‌, ಬಸವರಾಜ್‌ (24), ಮಹೇಶ್‌ (38) ನಂಜನಗೂಡಿನ ಅಂಬ್ಲೆ,ಪ್ರೀತಮ್‌(21), ರಾಧಾರವಿ (22), ಮಾರುತಿ ಅವರ ವಿಳಾಸ ತಿಳಿದುಬಂದಿಲ್ಲ.

ಐಸಿಯು, ಎಮರ್ಜೆನ್ಸಿ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ವಿವರ
ಯುಮುನಾ (ಕೊಳ್ಳೆಗಾಲದ ಉತ್ತರಹಳ್ಳಿ), ಲಕ್ಷ್ಮೀ, ಪ್ರದೀಪ (ಟಿ.ನರಸೀಪುರದ ಭೈರಪುರ), ಆರ್‌.ಕಾವ್ಯ, ಜಿ.ಎನ್‌.ಕಾವ್ಯ (ಮೈಸೂರಿನ ಮಾತಳ್ಳಿ), ಎಂ.ವಿ.ಕಾವ್ಯ (ಕೊಡಗಿನ ಕುಶಾಲನಗರ), ರಘುವೀರ್, ಸಿ.ಸತೀಶ್‌, ವಿ.ಜಿ.ರಂಜಿತಾ (ಮೈಸೂರಿನ ಹೆಬ್ಬಾಳ 1ನೇ ಹಂತ).

ಕಾರ್ಕಳ ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ: ಮೇಘಶ್ರೀ, ದಿವ್ಯಶ್ರೀ, ವಿದ್ಯಾ, ಸುಷ್ಮಾ, ಪೂರ್ಣಿಮಾ, ಹರ್ಷಿತಾ, ನಂಜುಡಸ್ವಾಮಿ, ದೀಪಿಕಾ, ಅಂಬಿಕಾ, ಮಂಜುಳಾ.

ಕಾರ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ: ಮಾನಸಾ, ಶ್ವೇತ, ಕೆ.ಎಸ್‌. ಸುಷ್ಮಾ, ನಳಿನಿ, ಸಿ.ಸುನೀಲ್, ಮುತ್ತುರಾಜ್‌, ಜಗದೀಶ್‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT