ಗುರುವಾರ, 13 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ಣಾಟಕ ಬ್ಯಾಂಕ್: ಹೆಚ್ಚುವರಿ ನಿರ್ದೇಶಕರಾಗಿ ಜೀವನದಾಸ್, ಗುರುರಾಜ ಆಚಾರ್ಯ

Last Updated 27 ಏಪ್ರಿಲ್ 2022, 16:16 IST
ಅಕ್ಷರ ಗಾತ್ರ

ಮಂಗಳೂರು: ಕರ್ಣಾಟಕ ಬ್ಯಾಂಕಿನ ಹೆಚ್ಚುವರಿ ನಿರ್ದೇಶಕರಾಗಿ ಜೀವನ್‍ದಾಸ್ ನಾರಾಯಣ್ ಹಾಗೂ ಕಲ್ಮಂಜೆ ಗುರುರಾಜ ಆಚಾರ್ಯ ಅವರನ್ನು ಹೆಚ್ಚುವರಿ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.

ಕಂಪನಿ ಕಾಯ್ದೆ 2013ರ ಸೆಕ್ಷನ್ 161ರ ಅಡಿಯಲ್ಲಿ ಮಾಡಿರುವ ಈ ನೇಮಕವನ್ನು, ಮಂಗಳವಾರ ನಡೆದ ಬ್ಯಾಂಕಿನ ಆಡಳಿತ ಮಂಡಳಿಯ ಸಭೆಯಲ್ಲಿ ಅನುಮೋದಿಸಲಾಯಿತು.

ಜೀವನ್‍ದಾಸ್ ನಾರಾಯಣ್ ಅವರು ಮೈಸೂರು ವಿಶ್ವವಿದ್ಯಾಲಯದಿಂದ ವಾಣಿಜ್ಯ ವಿಷಯದಲ್ಲಿ ಪದವಿ ಪಡೆದವರು. 40 ವರ್ಷಗಳ ಸುದೀರ್ಘ ಅನುಭವವನ್ನು ಬ್ಯಾಂಕಿಂಗ್ ರಂಗ ಹಾಗೂ ಹಣಕಾಸು ವಲಯದಲ್ಲಿ ಹೊಂದಿದ್ದಾರೆ. ಸ್ಟೇಟ್ ಬ್ಯಾಂಕ್ ಆಫ್ ಟ್ರಾವಂಕೂರ್‌ನಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಉಪ ವ್ಯವಸ್ಥಾಪಕ ನಿರ್ದೇಶಕರಾಗಿ ನಿವೃತ್ತರಾಗಿದ್ದಾರೆ. ನಿವೃತ್ತಿಯ ನಂತರ ಅವರು 2017ರಲ್ಲಿ ಅಲ್ಪಾವಧಿಗೆ ‘ಸೋಮಾ ಎಂಟರ್‌ ಪ್ರೈಸಸ್ ಲಿಮಿಟೆಡ್’ನ ಮಂಡಳಿಯಲ್ಲಿ ಎಸ್‍ಬಿಐನ ನಾಮನಿರ್ದೇಶಿತ ನಿರ್ದೇಶಕರಾಗಿದ್ದರು.

2016ರ ಬಿಎಫ್‌ಎಸ್‌ಐ ಸೆಕ್ಟರ್‌ನ ಬಿಟಿ–ಪಿಡ್ಲ್ಯುಸಿಯಿಂದ ಮಾನ್ಯತೆಗೊಂಡ ಭಾರತದ 40 ಶ್ರೇಷ್ಠ ಸಿಇಒಗಳ ಪಟ್ಟಿಯಲ್ಲಿ ಗುರುತಿಸಿಕೊಂಡಿದ್ದಾರೆ. ಮಂಗಳೂರಿನ ಪ್ರಮುಖ ಮ್ಯಾನೇಜ್‍ಮೆಂಟ್ ಇನ್‌ಸ್ಟಿಟ್ಯೂಟ್ ಎಂಎಸ್‌ಎನ್‌ಐಎಂನ ಆಡಳಿತ ಮಂಡಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅವರು, ಅದರ ಕರೆಸ್ಪಾಂಡೆಂಟ್ ಆಗಿ ನಾಮನಿರ್ದೇಶನಗೊಂಡಿದ್ದಾರೆ. ಆಡಳಿತ ಮಂಡಳಿಯ ಸದಸ್ಯ ಹಾಗೂ ಕರೆಸ್ಪಾಂಡೆಂಟ್ ಈ ಎರಡೂ ಸ್ಥಾನಗಳಿಗೆ ವೇತನರಹಿತರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಕಲ್ಮಂಜೆ ಗುರುರಾಜ ಆಚಾರ್ಯ ಅವರು ಬೆಂಗಳೂರಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಆಗಿ ಕಾರ್ಯನಿರ್ವಹಿಸುತ್ತಿದ್ದು, 30 ವರ್ಷಗಳ ಅನುಭವ ಹೊಂದಿದ್ದಾರೆ. ಬಿಕಾಂ, ಸಿಎಂಎ, ಸಿಎ ಪರೀಕ್ಷೆಯಲ್ಲಿ ಉನ್ನತ ರ್‍ಯಾಂಕ್ ಪಡೆದಿದ್ದಾರೆ. ಪ್ರಸ್ತುತ ‘ಕೆ.ಜಿ ಆಚಾರ್ಯ ಆಂಡ್ ಕೋ’ ಸಂಸ್ಥೆಯ ಮುಖ್ಯ ಪಾಲುದಾರರಾಗಿದ್ದಾರೆ ಹಾಗೂ ‘ಬೆಂಗಳೂರು- ಫೈನಾನ್ಶಿಯಲ್ ರಿಪೋರ್ಟಿಂಗ್ ರಿವ್ಯೂ ಗ್ರೂಪ್’ ಸದಸ್ಯರಾಗಿದ್ದಾರೆ. ಈ ಹಿಂದೆ ಸ್ಟೇಟ್ ಬ್ಯಾಂಕ್ ಆಫ್ ಮೈಸೂರ್‌ನ ಆಡಳಿತ ಮಂಡಳಿಯಲ್ಲಿ ನಿರ್ದೇಶಕರಾಗಿದ್ದರು ಮತ್ತು ಲೆಕ್ಕ ಪರಿಶೋಧನಾ ಸಮಿತಿಯ ಅಧ್ಯಕ್ಷರೂ ಆಗಿದ್ದರು. ರಿಸ್ಕ್ ಮ್ಯಾನೇಜ್ಮೆಂಟ್ ಕಮಿಟಿ, ನಾಮಿನೇಷನ್ ಕಮಿಟಿ, ರೆಮ್ಯುನರೇಷನ್ ಕಮಿಟಿ ಹಾಗೂ ಹೈವ್ಯಾಲ್ಯು ಫ್ರಾಡ್ ಕಮಿಟಿ ಗಳಲ್ಲಿ ಆಡಳಿತ ಮಂಡಳಿಯ ಸದಸ್ಯರಾಗಿದ್ದರು. ಐಸಿಎಐ ನವದೆಹಲಿಯ ತಜ್ಞರ ಸಲಹಾ ಸಮಿತಿಯ ಸದಸ್ಯರೂ ಆಗಿದ್ದರು ಎಂದು ಕರ್ಣಾಟಕ ಬ್ಯಾಂಕ್‌ನ ಮುಖ್ಯ ವ್ಯವಸ್ಥಾಪಕ ದೇವದಾಸ್ ಉಡುಪ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT