ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ಣಾಟಕ ಬ್ಯಾಂಕ್‌: ₹800 ಕೋಟಿ ಸಂಗ್ರಹಕ್ಕೆ ಒಪ್ಪಿಗೆ

Published 26 ಅಕ್ಟೋಬರ್ 2023, 19:23 IST
Last Updated 26 ಅಕ್ಟೋಬರ್ 2023, 19:23 IST
ಅಕ್ಷರ ಗಾತ್ರ

ಮಂಗಳೂರು: ಆದ್ಯತಾ ಷೇರುಗಳ ವಿತರಣೆಯ ಮೂಲಕ ₹800 ಕೋಟಿ ಬಂಡವಾಳ ಸಂಗ್ರಹಿಸುವ ಪ್ರಸ್ತಾವಕ್ಕೆ ಕರ್ಣಾಟಕ ಬ್ಯಾಂಕ್‌ನ ನಿರ್ದೇಶಕರ ಮಂಡಳಿಯ ಸಭೆಯಲ್ಲಿ ಗುರುವಾರ ಅನುಮೋದನೆ ನೀಡಲಾಗಿದೆ.

ತಲಾ ₹10 ಮುಖಬೆಲೆಯ 3.34 ಕೋಟಿ ಷೇರುಗಳನ್ನು ತಲಾ ₹239.52 ಬೆಲೆಗೆ ಮಾರಾಟ ಮಾಡಲು ಉದ್ದೇಶಿಸಲಾಗಿದೆ. ಈ ಷೇರುಗಳನ್ನು ಎಚ್‌ಡಿಎಫ್‌ಸಿ ಲೈಫ್‌ ಇನ್ಶೂರೆನ್ಸ್ ಕಂಪನಿ, ಬಜಾಜ್‌ ಅಲಯನ್ಸ್‌ ಲೈಫ್‌ ಇನ್ಶೂರೆನ್ಸ್‌ ಕಂಪನಿ, ಕ್ವಾಂಟ್‌ ಮ್ಯೂಚುಯಲ್‌ ಫಂಡ್‌, ಭಾರತಿ ಆಕ್ಸಾ ಲೈಫ್‌ ಇನ್ಶೂರೆನ್ಸ್‌ ಕಂಪನಿ ಹಾಗೂ ಬಜಾಜ್‌ ಅಲಯನ್ಸ್‌ ಜನರಲ್‌ ಇನ್ಶೂರೆನ್ಸ್‌ ಕಂಪನಿಗಳಿಗೆ ಮಾರಾಟ ಮಾಡುವ ಪ್ರಸ್ತಾವದ ಪರವಾಗಿ ಷೇರುದಾರರಿಂದ ಶೇ 99.79ರಷ್ಟು ಮತಗಳು ಲಭಿಸಿವೆ ಎಂದು ಬ್ಯಾಂಕ್‌ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಬ್ಯಾಂಕ್‌ನ ಎಂಡಿ ಮತ್ತು ಸಿಇಒ ಶ್ರೀಕೃಷ್ಣ ಎಚ್‌., ‘ನಮ್ಮ ಎಲ್ಲಾ ಅಭಿವೃದ್ಧಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಬಂಡವಾಳವನ್ನು ಒದಗಿಸುವ ನಿಟ್ಟಿನಲ್ಲಿ ಇದು ಪ್ರಮುಖ ಹೆಜ್ಜೆಯಾಗಿದೆ’ ಎಂದರು.

ಬ್ಯಾಂಕ್‌ನ ಕಾರ್ಯನಿರ್ವಾಹಕ ನಿರ್ದೇಶಕ ಶೇಖರ್‌ ರಾವ್‌ ಮಾತನಾಡಿ, ‘ಬ್ಯಾಂಕ್‌ನ ಅಭಿವೃದ್ಧಿಯ ಹಾದಿಯಲ್ಲಿ ಇದು ಪ್ರಮುಖ ಹೆಜ್ಜೆ. ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ನಮ್ಮ ಸ್ಥಾನವನ್ನು ಇದು ಇನ್ನಷ್ಟು ಗಟ್ಟಿಗೊಳಿಸಲಿ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT