ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ಣಾಟಕ ಬ್ಯಾಂಕ್‌: ₹700 ಕೋಟಿ ಬಂಡವಾಳ ಸಂಗ್ರಹಕ್ಕೆ ಸಿದ್ಧತೆ

Published 28 ಜನವರಿ 2024, 23:30 IST
Last Updated 28 ಜನವರಿ 2024, 23:30 IST
ಅಕ್ಷರ ಗಾತ್ರ

ಮಂಗಳೂರು: ಷೇರುಗಳ ಮಾರಾಟದ ಮೂಲಕ ₹700 ಕೋಟಿ ಬಂಡವಾಳ ಸಂಗ್ರಹಿಸಲು ಶನಿವಾರ ನಡೆದ ಕರ್ಣಾಟಕ ಬ್ಯಾಂಕ್‌ನ ನಿರ್ದೇಶಕ ಮಂಡಳಿ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ಇದರಲ್ಲಿ ₹100 ಕೋಟಿಯನ್ನು ಆದ್ಯತಾ ಷೇರುಗಳ ಮೂಲಕ ಹಾಗೂ ಉಳಿದ ₹600 ಕೋಟಿಗಳನ್ನು ವಿವಿಧ ಹಂತಗಳಲ್ಲಿ ಷೇರು ಮಾರಾಟ ಮಾಡುವ ಮೂಲಕ ಸಂಗ್ರಹಿಸಲಾಗುವುದು ಎಂದು ಬ್ಯಾಂಕ್‌ ಪ್ರಕಟಣೆಯಲ್ಲಿ ತಿಳಿಸಿದೆ.

2023ರ ಸೆಪ್ಟೆಂಬರ್‌ ತಿಂಗಳಲ್ಲಿ ನಡೆದಿದ್ದ ನಿರ್ದೇಶಕ ಮಂಡಳಿ ಸಭೆಯಲ್ಲಿ ಒಟ್ಟಾರೆಯಾಗಿ ₹1500 ಕೋಟಿ ಬಂಡವಾಳ ಸಂಗ್ರಹಿಸಲು ಮಂಡಳಿ ಅನುಮತಿ ನೀಡಿತ್ತು. ಅದರಲ್ಲಿ ₹700 ಕೋಟಿಯನ್ನು ಈಗಾಗಲೇ ಸಂಗ್ರಹಿಸಲಾಗಿದ್ದು, ಉಳಿದ ಮೊತ್ತವನ್ನು ಸಂಗ್ರಹಿಸಲು ಶನಿವಾರ ಅನುಮತಿ ನೀಡಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಕೃಷ್ಣನ್ ಎಚ್‌., ‘ಬ್ಯಾಂಕ್‌ನ ಅಭಿವೃದ್ಧಿ ಮತ್ತು ಸುಸ್ಥಿರತೆಯ ಮೌಲ್ಯವರ್ಧನೆಯಾಗಿ ಈ ಬಂಡವಾಳ ಕ್ರೋಡೀಕರಣ ನೆರವಾಗಲಿದೆ’ ಎಂದಿದ್ದಾರೆ.

‘ಉದ್ದೇಶಿತ ಬಂಡವಾಳ ಕ್ರೋಡೀಕರಣದಿಂದ ಬ್ಯಾಂಕ್‌ನ ಅಭಿವೃದ್ಧಿ ಮತ್ತು ಆವಿಷ್ಕಾರಗಳಿಗೆ ಇನ್ನಷ್ಟು ಚುರುಕು ದೊರೆಯಲಿದೆ’ ಎಂದು ಕಾರ್ಯನಿರ್ವಾಹಕ ನಿರ್ದೇಶಕ ಶೇಖರ್ ರಾವ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT