ಮಂಗಳೂರು: ಸುಳ್ಯ ವಿಧಾನಸಭಾ ಕ್ಷೇತ್ರದ ಎಸ್. ಅಂಗಾರ ಅವರು ಸಚಿವರಾಗಿರುವುದು ಖುಷಿ ತಂದಿದೆ. ಜಿಲ್ಲೆಯಲ್ಲಿ ಮತ್ತಷ್ಟು ಅಭಿವೃದ್ಧಿ ಕಾಣಲಿ. ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಲಿ ಎಂದು ಶಾಸಕ ಯು.ಟಿ.ಖಾದರ್ ಹೇಳಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತಾಲ್ಲೂಕು ಪಂಚಾಯಿತಿಯನ್ನು ರದ್ದು ಪಡಿಸಲು ಮುಂದಾಗಿರುವ ಸರ್ಕಾರದ ಹುನ್ನಾರ ಹಾಗೂ ಸಚಿವರು ನೀಡಿರುವ ಹೇಳಿಕೆಯನ್ನು ತೀವ್ರವಾಗಿ ಖಂಡಿಸಲಾಗುತ್ತದೆ’ ಎಂದು ಹೇಳಿದರು.

ತಾ.ಪಂ ರದ್ದು ಪಡಿಸಲು ಹೊರಟಿರುವ ಸರ್ಕಾರ ಹಾಗೂ ಸಚಿವರ ಇಂತಹ ಗೊಂದಲದ ಹೇಳಿಕೆಗಳಿಂದ ಜನರನ್ನು ದಾರಿ ತಪ್ಪಿಸುವ ಕೆಲಸ ಕೈಬಿಡಬೇಕು. ಯಾವ ಕಾರಣದಿಂದ ರದ್ದು ಮಾಡ್ತಾ ಇದ್ದೀರಿ ಎಂಬುದನ್ನು ಜನರಿಗೆ ತಿಳಿಸಿ. 73ನೇ ತಿದ್ದುಪಡಿಯಂತೆ ಮೂರು ಹಂತಗಳಲ್ಲಿ ಅಧಿಕಾರ ವಿಕೇಂದ್ರೀಕರಣ ಆಗಬೇಕು ಎಂಬುದು ಸಂವಿಧಾನದ ಆಶಯವಾಗಿದೆ. ತಾಪಂ ರದ್ದು ಪಡಿಸಿ ಎಲ್ಲ ಕೆಲಸವನ್ನು ಶಾಸಕರೇ ಮಾಡಬೇಕೆ?. ಇದರಿಂದಾಗಿ ಅಭಿವೃದ್ಧಿಗೆ ಹಿನ್ನಡೆ ಆಗುತ್ತದೆ. ಕೂಡಲೇ ಇಂತಹ ಯೋಚನೆ ಕೈಬಿಡಬೇಕು ಎಂದು ಖಾದರ್ ಒತ್ತಾಯ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.