ಉಜಿರೆ: ‘ಶಾಲಾ ಕಾಲೇಜುಗಳಲ್ಲಿ ತೆರೆದ ಮನೆ ಕಾರ್ಯಕ್ರಮವನ್ನು ಪ್ರತಿ ಗುರುವಾರ ಕೈಗೊಂಡು, ಮಕ್ಕಳಿಗೆ ಮಕ್ಕಳ ಹಕ್ಕುಗಳ ಕುರಿತು ಜಾಗೃತಿ ಮೂಡಿಸಬೇಕು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ್ ಎಸ್.ಕೋಸಂಬೆ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಪೊಲೀಸ್ ಠಾಣೆಗೆ ಭಾನುವಾರ ದಿಢೀರ್ ಭೇಟಿದ ನೀಡಿದ ಅವರು ಅಲ್ಲಿ ಮಕ್ಕಳ ವಿಶೇಷ ಪೊಲೀಸ್ ಘಟಕದ ಕಾರ್ಯ ವೈಖರಿಯನ್ನು ಹಾಗೂ ತೆರದ ಮನೆ ಕಾರ್ಯಕ್ರಮದ ರಿಜಿಸ್ಟರ್ ಹಾಗೂ ಮಕ್ಕಳಿಗೆ ಸಂಬಂಧಿಸಿದ ಪ್ರಕರಣಗಳ ಕುರಿತ ದಾಖಲೆಗಳನ್ನು ಪರಿಶೀಲಿಸಿದರು.

‘ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳನ್ನು ಬಾಲ ನ್ಯಾಯ ಮಂಡಳಿ ಮುಂದೆ ಹಾಜರು ಪಡಿಸಲು ಫಾರಂ ನಂ. 1 ಹಾಗೂ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಮಕ್ಕಳನ್ನು ಸಮಾಲೋಚನೆಗೆ ಕರೆದೊಯ್ದಾಗ ಫಾರಂ ನ. 17 ಅನ್ನು ಕಡ್ಡಾಯವಾಗಿ ಭರ್ತಿ ಮಾಡಬೇಕು’ ಎಂದು ಸೂಚಿಸಿದರು.

ಮಕ್ಕಳ ಅಪಹರಣ ಪ್ರಕರಣ, ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯಡಿ ದಾಖಲಾದ ಪ್ರಕರಣ, ಬಾಲ್ಯ ವಿವಾಹ ಪ್ರಕರಣ ಸೇರಿದಂತೆ ಮಕ್ಕಳ ಹಕ್ಕುಗಳ ಉಲ್ಲಂಘನೆಗೆ ಸಂಬಂಧಿಸಿದ ಪ್ರಕರಣಗಳನ್ನು ಸಕಾಲದಲ್ಲಿ ವರದಿ ಮಾಡಿಕೊಳ್ಳುವಂತೆ ಸೂಚಿಸಿದರು.

2015ರ ಮಕ್ಕಳ ನ್ಯಾಯ (ಮಕ್ಕಳ ರಕ್ಷಣೆ ಮತ್ತು ಪೋಷಣೆ) ಕಾಯ್ದೆಯ ಸೆಕ್ಷನ್ 107 ಹಾಗೂ 2016 ರ ಮಕ್ಕಳ ನ್ಯಾಯ (ಮಕ್ಕಳ ರಕ್ಷಣೆ ಮತ್ತು ಪೋಷಣೆ) ಮಾದರಿ ನಿಯಮ 8(6) ಹಾಗೂ 86(11) ಅನ್ವಯ ಪದನಿಮಿತ್ತ ಅಧಿಕಾರಿಗಳ ಹೆಸರು, ವಿಳಾಸ, ದೂರವಾಣಿ ಸಂಖ್ಯೆಗಳಿರುವ ಮಾಹಿತಿ ಫಲಕವನ್ನು ಹಾಗೂ ಮಕ್ಕಳ ಸಹಾಯ ವಾಣಿ ಸಂಖ್ಯೆ 1098 ಶಾಶ್ವತ ಫಲಕದಲ್ಲಿ ತ್ವರಿತವಾಗಿ ಅಳವಡಿಸಬೇಕು ಎಂದು ಸೂಚಿಸಿದರು.

ಧರ್ಮಸ್ಥಳ ಠಾಣೆಯ ಪಿಎಸ್ಐ ಸಮರ್ಥ ಗಾಣಿಗೇರ್ ಹಾಗೂ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.