ಭಾನುವಾರ, ಆಗಸ್ಟ್ 1, 2021
22 °C

ಮಂಗಳೂರು: ನಿರಂತರ ಮಳೆ, ಕುಸಿದ ಆವರಣ ಗೋಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಪುತ್ತೂರು ತಾಲ್ಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಅಲಬಿಮೂಲೆಯಲ್ಲಿ ಮನೆಯ ಆವರಣ ಗೋಡೆ ಕುಸಿದು ಬಿದ್ದಿದ್ದು, ಮಹಿಳೆಯೊಬ್ಬರು ಅಪಾಯದಿಂದ ಪಾರಾಗಿದ್ದಾರೆ.

ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಭಾನುವಾರ ಬೆಳಿಗ್ಗೆ ಅಲಬಿಮೂಲೆ ಶೇಕ್ ಇಮಾಮು ಶಾಹೀದ್ ಅವರ ಮನೆಯ ಅಡುಗೆ ಕೋಣೆಯ ಮೇಲೆ, ಅವರ ಮಗನ ಮನೆಯ ಆವರಣ ಗೋಡೆ ಕುಸಿದು ಬಿದ್ದಿದೆ.ಅಡುಗೆ ಮನೆಯಲ್ಲಿ ಇದ್ದ ಮಹಿಳೆ ಸದ್ದು ಕೇಳಿ ಓಡಿ ಹೊರಬಂದಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಸ್ಥಳೀಯರು ಬಂದು ಅಡುಗೆ ಮನೆಯಲ್ಲಿ ಬಿದ್ದ ಕಲ್ಲಗಳನ್ನು ತೆರವುಗೊಳಿಸಿದ್ದಾರೆ.

ಎರಡು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು, ಕುಮಾರಧಾರ, ನೇತ್ರಾವತಿ ನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಮಂಗಳೂರು ತಾಲ್ಲೂಕಿನಲ್ಲಿ ಗರಿಷ್ಠ 7 ಸೆಂ.ಮೀ ಮಳೆ ದಾಖಲಾಗಿದೆ. ಜಿಲ್ಲೆಯಲ್ಲಿ ಸರಾಸರಿ 4.2 ಮೀಟರ್ ಮಳೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು