ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಜಿಕಲ್ಲು: ಗುಡ್ಡ ಕುಸಿದ ಸ್ಥಳಕ್ಕೆ ಸಚಿವ ಸುನಿಲ್ ಕುಮಾರ್ ಭೇಟಿ, ಪರಿಶೀಲನೆ

Last Updated 7 ಜುಲೈ 2022, 8:34 IST
ಅಕ್ಷರ ಗಾತ್ರ

ಬಂಟ್ವಾಳ (ದಕ್ಷಿಣ ಕನ್ನಡ):ಇಲ್ಲಿನ ಪಂಜಿಕಲ್ಲು ಗ್ರಾಮದ ಮುಕ್ಕುಡ ಎಂಬಲ್ಲಿ ಗುಡ್ಡ ಕುಸಿದು ಮೂವರು ಮೃತಪಟ್ಟಿರುವ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್, ಶಾಸಕರು ಮತ್ತು ಜಿಲ್ಲಾಧಿಕಾರಿ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.

'ಇಲ್ಲಿನ ಶೆಡ್ ನೊಳಗೆ ಸಿಲುಕಿಕೊಂಡಿದ್ದ ನಾಲ್ವರು ರಬ್ಬರ್ ಟ್ಯಾಪಿಂಗ್ ‌ಕಾರ್ಮಿಕರ ಪೈಕಿ ಮೂವರು ಮೃತಪಟ್ಟಿದ್ದಾರೆ. ಒಬ್ಬರು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ಧನ ನೀಡುವ ಬಗ್ಗೆ ಸರ್ಕಾರ ನಿರ್ಧರಿಸಲಿದೆ.
ಅವಿಭಜಿತ ಜಿಲ್ಲೆಯಾದ್ಯಂತ ಪ್ರಾಕೃತಿಕ ವಿಕೋಪದಿಂದ ಹಾನಿಗೀಡಾದ ಪ್ರದೇಶಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡುತ್ತೇನೆ. ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಮಂಗಳೂರಿನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ತುರ್ತು ಸಭೆ ಕರೆದು ಸಮಾಲೋಚನೆ ನಡೆಸಲಾಗುವುದು' ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದರು.

ಶಾಸಕ‌ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ತಹಶೀಲ್ದಾರ್ ಡಾ.ಸ್ಮಿತಾ ರಾಮು, ಎಸ್ಪಿ ಋಷಿಕೇಶ್ ಸೋನವಾಣೆ, ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ ಸ್ಪೆಕ್ಟರ್ ಟಿ.ಡಿ.ನಾಗರಾಜ್, ಎಸೈ ಹರೀಶ್, ಪಿಡಿಒ ವಿದ್ಯಾ ಶಿವಾನಂದಇದ್ದರು.

ಕೊಳದಂತಾದ ವಿಮಾನ‌ ನಿಲ್ದಾಣ ರಸ್ತೆ
ಬಜ್ಪೆ (ಮಂಗಳೂರು): ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಮರವೂರಿನಲ್ಲಿ ಅಸಮರ್ಪಕ ಚರಂಡಿಯಿಂದಾಗಿ ರಸ್ತೆಯೆ ಕೊಳದಂತಾಗಿದೆ. ಜತೆಗೆ ಮರಳು ಕೂಡ ನೀರಿನ ಜೊತೆಗೆ ಹರಿದು ಬರುವುದರಿಂದ ದ್ವಿಚಕ್ರ ಸವಾರರು ವಾಹನ ಚಲಾಯಿಸಲು ಹರಸಾಹಸ ಪಡುವಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT