ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಣಚೂರು: ಡಾ.ಯು.ಟಿ.ಇಫ್ತಿಕಾರ್‌ಗೆ ಸನ್ಮಾನ

Published 10 ಆಗಸ್ಟ್ 2024, 15:24 IST
Last Updated 10 ಆಗಸ್ಟ್ 2024, 15:24 IST
ಅಕ್ಷರ ಗಾತ್ರ

ಉಳ್ಳಾಲ: ‘ಕರ್ನಾಟಕ ಸ್ಟೇಟ್ ಅಲೈಡ್ ಆ್ಯಂಡ್ ಹೆಲ್ತ್ ಕೇರ್ ಕೌನ್ಸಿಲ್’ ಅಧ್ಯಕ್ಷರಾಗಿ ನೇಮಕಗೊಂಡಿರುವ ಡಾ.ಯು.ಟಿ.ಇಫ್ತಿಕಾರ್ ಫರೀದ್ ಅವರಿಗೆ ಕಣಚೂರು ಇಸ್ಲಾಮಿಕ್ ಎಜುಕೇಷನ್ ಟ್ರಸ್ಟ್ ವತಿಯಿಂದ ಅಭಿನಂದನಾ ಕಾರ್ಯಕ್ರಮ ಶನಿವಾರ ನಡೆಯಿತು.

ಕಣ್ಣೂರು ಹಾಗೂ ಕ್ಯಾಲಿಕಟ್ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಪ್ರೊ.ಅಬ್ದುಲ್ ರಹಿಮಾನ್ ಮಾತನಾಡಿ, ಬದ್ಧತೆ, ಕಠಿಣ ಪರಿಶ್ರಮದಿಂದ ಮಾತ್ರ ಯಶಸ್ಸು ಸಿಗಲು ಸಾಧ್ಯ ಎನ್ನುವುದಕ್ಕೆ ಯು.ಟಿ.ಇಫ್ತಿಕಾರ್ ಅಲಿ ಉದಾಹರಣೆಯಾಗಿದ್ದಾರೆ ಎಂದು ಹೇಳಿದರು.

ಅಭಿನಂದನೆ ಸ್ವೀಕರಿಸಿದ ಯು.ಟಿ.ಇಫ್ತಿಕಾರ್, ವೈದ್ಯಕೀಯ ಕ್ಷೇತ್ರದ ಯಾವುದೇ ವಿಭಾಗಗಳ ನಿರ್ಲಕ್ಷ್ಯ ಸಲ್ಲದು. ‘ಅಲೈಡ್ ಆ್ಯಂಡ್ ಹೆಲ್ತ್ ಸೈನ್ಸಸ್‌ನ’ ವಿಷಯಗಳು ಆರೋಗ್ಯದ ಕ್ಷೇತ್ರದಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು.

ಕಣಚೂರು ಇಸ್ಲಾಮಿಕ್ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಯು.ಕೆ‌.ಮೋನು ಅಧ್ಯಕ್ಷತೆ ವಹಿಸಿದ್ದರು.

ಟ್ರಸ್ಟಿ ಜೊಹರಾ ಮೋನು, ಕಣಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನಿರ್ದೇಶಕ ಅಬ್ದುಲ್ ರಹಿಮಾನ್, ಕಣಚೂರು ಆರೋಗ್ಯ ವಿಜ್ಞಾನಗಳ ಸಲಹಾ ಮಂಡಳಿ ಅಧ್ಯಕ್ಷ ಡಾ.ಮಹಮ್ಮದ್ ಇಸ್ಮಾಯಿಲ್ ಹೆಜಮಾಡಿ, ಕಣಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಡೀನ್ ಡಾ.ಶಹನವಾಜ್ ಮಾಣಿಪ್ಪಾಡಿ, ಮುಖ್ಯ ಆಡಳಿತಾಧಿಕಾರಿ ಡಾ.ರೋಹನ್ ಮೋನಿಸ್, ಡಾ.ಶಮೀಮ ಭಾಗವಹಿಸಿದ್ದರು.

ಡಾ.ಮುಹಮ್ಮದ್ ಸುಹೈಲ್ ಸ್ವಾಗತಿಸಿದರು. ಡಾ.ಶಮೀಮ ವಂದಿಸಿದರು. ಡಾ.ಪ್ರತಿಕ್ಷಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT