ಮಂಗಳೂರು: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣ ಸಂಬಂಧ ಮೃತದೇಹದ ಅವಶೇಷ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದೆ. ಸಾಕ್ಷಿ ದೂರುದಾರ ತೋರಿಸಿದ್ದ ಒಂಬತ್ತನೇ ಜಾಗದಲ್ಲಿ ವಿಶೇಷ ತನಿಖಾ ತಂಡವು ಶನಿವಾರ ನೆಲವನ್ನು ಅಗೆಯುವ ಕಾರ್ಯವನ್ನು ಶುರು ಮಾಡಿದೆ.

ಶೋಧ ನಡೆಯುತ್ತಿರುವ ಜಾಗವು ಧರ್ಮಸ್ಥಳವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿಯಿಂದ ಕೇವಲ 10 ಮೀ ದೂರದಲ್ಲಿದೆ. ಶೋಧ ಕಾರ್ಯದ ದೃಶ್ಯಗಳು ಹೊರಗಡೆ ಕಾಣಬಾರದು ಎಂಬ ಉದ್ದೇಶದಿಂದ ಅಲ್ಲಿ ಹೆದ್ದಾರಿ ಪಕ್ಕದಲ್ಲಿ ಉದ್ದಕ್ಕೂ ಹಸಿರು ಬಣ್ಣದ ಪರದೆ ಕಟ್ಟಲಾಗಿದೆ.

ಈ ಪ್ರಕರಣದ ಸಾಕ್ಷಿ ದೂರುದಾರ ನೇತ್ರಾವತಿ ನದಿ ಪಕ್ಕದ ಕಾಡಿನಲ್ಲಿ ತೋರಿಸಿದ ಎಂಟು ಜಾಗಗಳನ್ನು ಎಸ್ಐಟಿ ಇದುವರೆಗೆ ಅಗೆಯಿಸಿದೆ. ಆತ ತೋರಿಸಿದ್ದ ಆರನೇ ಜಾಗದಲ್ಲಿ ಗಂಡಸಿನ ಮೃತದೇಹದ ಅವಶೇಷಗಳು ಗುರುವಾರ ಪತ್ತೆಯಾಗಿದ್ದವು. ಇನ್ನುಳಿದ ಎಳು ಜಾಗಗಳಲ್ಲಿ ಮೃತದೇಹದ ಯಾವುದೇ ಕುರುಹುಗಳು ಸಿಕ್ಕಿರಲಿಲ್ಲ.
.ಧರ್ಮಸ್ಥಳ ಪ್ರಕರಣ: ಆರನೇ ಜಾಗದಲ್ಲಿ ಗಂಡಸಿನ ಮೃತದೇಹದ ಕುರುಹು ಪತ್ತೆ.ಧರ್ಮಸ್ಥಳ ಪ್ರಕರಣ | ಮುಂದುವರಿದ ಶೋಧ ಕಾರ್ಯ: 4ನೇ ದಿನ ಸಿಗದ ಅವಶೇಷ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.