ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಾಲ್ ಬ್ಯಾಡ್ಮಿಂಟನ್‌: ಕರ್ನಾಟಕ ಚಾಂಪಿಯನ್

Published 12 ಜನವರಿ 2024, 7:34 IST
Last Updated 12 ಜನವರಿ 2024, 7:34 IST
ಅಕ್ಷರ ಗಾತ್ರ

ಮೂಡುಬಿದಿರೆ (ದಕ್ಷಿಣ ಕನ್ನಡ): ಕರ್ನಾಟಕ ಮಹಿಳಾ ತಂಡದವರು ಮಹಾರಾಷ್ಟ್ರದ ಗಡ್‌ ಚಿರೋಲಿಯಲ್ಲಿ ನಡೆದ ಮಹಿಳೆಯರ ರಾಷ್ಟ್ರೀಯ ಬಾಲ್‌ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನ ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ. ರಾಜ್ಯ ತಂಡವನ್ನು ಪ್ರತಿನಿಧಿಸಿದ 10 ಆಟಗಾರ್ತಿಯರ ಪೈಕಿ 8 ಮಂದಿ ಇಲ್ಲಿನ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿಯರು.

ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ದಿವ್ಯಾ ಎಂ ಅವರು ಮುನ್ನಡೆಸಿದ ತಂಡ ಬುಧವಾರ ರಾತ್ರಿ ನಡೆದ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ತಮಿಳುನಾಡು ವಿರುದ್ಧ 35–29ರಲ್ಲಿ ಜಯ ಗಳಿಸಿತು. ಸೆಮಿಫೈನಲ್‌ನಲ್ಲಿ 35–11, ಮತ್ತು 35–16ರಲ್ಲಿ ಕೇರಳ ವಿರುದ್ಧ ಕರ್ನಾಟಕ ಗೆಲುವು ಸಾಧಿಸಿತ್ತು.

ಚಾಂಪಿಯನ್‌ಷಿಪ್ ಟ್ರೋಫಿ ಮತ್ತು ವೈಯಕ್ತಿಕ ಪ್ರಶಸ್ತಿಗಳೊಂದಿಗೆ ಕರ್ನಾಟಕ ತಂಡದ ಆಟಗಾರ್ತಿಯರು
ಚಾಂಪಿಯನ್‌ಷಿಪ್ ಟ್ರೋಫಿ ಮತ್ತು ವೈಯಕ್ತಿಕ ಪ್ರಶಸ್ತಿಗಳೊಂದಿಗೆ ಕರ್ನಾಟಕ ತಂಡದ ಆಟಗಾರ್ತಿಯರು

ಚಾಂಪಿಯನ್‌ಷಿಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಪಲ್ಲವಿ ಬಿ.ಎಸ್ ಮತ್ತು ಸಹನಾ ಎಚ್‌.ವೈ ಅವರಿಗೆ ‘ಸ್ಟಾರ್ ಆಫ್ ಇಂಡಿಯಾ’ ಪ‍್ರಶಸ್ತಿ ಒಲಿಯಿತು. ಇವರಿಬ್ಬರೂ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿಯರು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT