ಮಂಗಳವಾರ, ಆಗಸ್ಟ್ 3, 2021
27 °C

ಕಾಸರಗೋಡು: ಒಂಭತ್ತು ಜನರಲ್ಲಿ ಕೊರೊನಾ ವೈರಸ್ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ನೆರೆಯ ಕಾಸರಗೋಡು ಜಿಲ್ಲೆಯಲ್ಲಿ ಒಂಭತ್ತು ಜನರಿಗೆ ಕೋವಿಡ್‌–19 ಸೋಂಕು ತಗುಲಿರುವುದು ಸೋಮವಾರ ದೃಢಪಟ್ಟಿದೆ.

‘ಒಂಭತ್ತು ಹೊಸ ಪ್ರಕರಣಗಳು ಸೋಮವಾರ ಪತ್ತೆಯಾಗಿವೆ. ಐವರು ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 207 ಸಕ್ರಿಯ ಪ್ರಕರಣಗಳಿವೆ. 192 ಜನರು ಕಾಸರಗೋಡು ಕೋವಿಡ್‌ ಆಸ್ಪತ್ರೆಗಳಲ್ಲಿ, 13 ಮಂದಿ ಕಣ್ಣೂರು ಆಸ್ಪತ್ರೆಯಲ್ಲಿ ಮತ್ತು ತಲಾ ಒಬ್ಬರು ಮಲಪ್ಪುರಂ ಹಾಗೂ ಎರ್ನಾಕುಲಂ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಕೇರಳ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್‌ ಸೋಂಕು ನಿಯಂತ್ರಣಕ್ಕಾಗಿ 6,355 ಜನರ ಮೇಲೆ ನಿಗಾ ಮುಂದುವರಿದಿದೆ. ಈ ಪೈಕಿ 6,161 ಜನರು ಹೋಂ ಕ್ವಾರಂಟೈನ್‌ನಲ್ಲಿದ್ದಾರೆ. 194 ಜನರನ್ನು ಆಸ್ಪತ್ರೆಗಳಲ್ಲಿ  ಐಸೋಲೇಷನ್‌ ವಾರ್ಡ್‌ಗಳಲ್ಲಿ ದಾಖಲಿಸಿ, ವೈದ್ಯಕೀಯ ನಿಗಾದಲ್ಲಿ ಇಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು