ಕಾಸರಗೋಡು: ಜಾಮೀನಿನಲ್ಲಿ ಬಿಡುಗಡೆಗೊಂಡ ನಂತರ ನ್ಯಾಯಾಲಯಕ್ಕೆ ಹಾಜರಾಗದೆ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮಲಪ್ಪುರಂ ಜಿಲ್ಲೆಯ ಪೂಕೋಟುಂಪಾಡಂ ನಿವಾಸಿ ತೆಕ್ಕುಂಪುರತ್ ಜಮಾಲುದ್ದೀನ್ (50) ಎಂಬಾತನನ್ನು ಪೈವಳಿಕೆಯಲ್ಲಿ ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.

2017 ಏ.23ರಂದು ನೆರೆಮನೆಯ ನಿವಾಸಿ ಆಲುಂಗಾಲ್ ಹಸೀನಾ (28) ಎಂಬಾಕೆಯ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ನಿಲಾಂಬೂರು ಪೊಲೀಸರಿಂದ ಬಂಧಿತನಾಗಿದ್ದ. ನಂತರ ಜಾಮೀನು ಪಡೆದು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ.

ಈ ಅವಧಿಯಲ್ಲಿ 2 ವರ್ಷಗಳ ಹಿಂದೆ ಪೈವಳಿಕೆಯಲ್ಲಿ ರಬ್ಬರ್ ಟ್ಯಾಪಿಂಗ್ ಕಾರ್ಮಿಕನಾಗಿದ್ದ. ಈ ಕುರಿತು ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದು, ನಿಲಾಂಬೂರಿಗೆ ಒಯ್ಯಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-29-1556724819

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.