ಕಾಸರಗೋಡು: ಸೀತಾಂಗೋಳಿಯ ಮೇಲಿನ ಪೇಟೆಯ ಕಟ್ಟಡವೊಂದರಲ್ಲಿ ಬಾಪಾಲಿಪೊನ ಕುಂಟಿಕಾ ನಿವಾಸಿ ಶಫಾಯತ್ (35) ಎಂಬುವರನ್ನು ಕೊಲೆ ಮಾಡಿದ ಆರೋಪದಲ್ಲಿ ಕುಂಬಳೆ ಬಳಿಯ ನಾಯ್ಕಾಪು ಕೋಟೆಕಾರು ನಿವಾಸಿ ಶ್ರೀನಿವಾಸ (39) ಎಂಬಾತನನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.

ಶಫಾಯತ್ ಅವರ ಶವ ಕಟ್ಟಡದ ಹಿಂಬದಿ ಬಿದ್ದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತಲೆಗೆ ಗಂಭೀರ ಏಟು ತಗುಲಿರುವುದು ಕಂಡುಬಂದಿದೆ. ತನಿಖೆ ಆರಂಭಿಸಿದ ಪೊಲೀಸರು ಆರೋಪಿಯನ್ನು ಪತ್ತೆ ಮಾಡಿ ಬಂಧಿಸಿದ್ದಾರೆ. ಶ್ರೀನಿವಾಸ ಮತ್ತು ಶಫಾಯತ್ ನಡುವೆ ಮಾತಿನ ಚಕಮಕಿ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶವವನ್ನು ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತರಿಗೆ ಪತ್ನಿ, 4 ಮಕ್ಕಳು ಇದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-29-860577677

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.