ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಸರಗೋಡು: 128 ಜನರಿಗೆ ಸೋಂಕು

Last Updated 5 ಆಗಸ್ಟ್ 2020, 15:59 IST
ಅಕ್ಷರ ಗಾತ್ರ

ಮಂಗಳೂರು: ನೆರೆಯ ಕಾಸರಗೋಡು ಜಿಲ್ಲೆಯಲ್ಲಿ ಮತ್ತೆ ಕೋವಿಡ್‌ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಏರಿಕೆ ಕಂಡುಬಂದಿದೆ. 128 ಜನರಿಗೆ ಕೋವಿಡ್‌ ಸೋಂಕು ತಗುಲಿರುವುದು ಬುಧವಾರ ದೃಢಪಟ್ಟಿದೆ.

‘ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ 119, ವಿದೇಶಗಳಿಂದ ವಾಪಸಾಗಿರುವ ಐವರು, ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಿಂದ ಹಿಂದಿರುಗಿರುವ ತಲಾ ಇಬ್ಬರಲ್ಲಿ ಕೋವಿಡ್‌ ಸೋಂಕು ಪತ್ತೆಯಾಗಿದೆ. 11 ಮಂದಿಗೆ ಯಾವ ಮೂಲದಿಂದ ಸೋಂಕು ತಗುಲಿದೆ ಎಂಬುದನ್ನು ಪತ್ತೆಹಚ್ಚಲಾಗುತ್ತಿದೆ’ ಎಂದು ಕಾಸರಗೋಡು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎ.ವಿ.ರಾಮದಾಸ್‌ ತಿಳಿಸಿದ್ದಾರೆ.

ಒಂದು ಸಾವು ಘೋಷಣೆ

ಕಾಸರಗೋಡು ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 76 ವರ್ಷದ ವ್ಯಕ್ತಿ ಆಗಸ್ಟ್‌ 1ರಂದು ಮೃತಪಟ್ಟಿರುವುದನ್ನು ಅಲ್ಲಿನ ಆರೋಗ್ಯ ಇಲಾಖೆ ಬುಧವಾರ ಘೋಷಿಸಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು ಏಳು ಮಂದಿ ಕೋವಿಡ್‌ ಸೋಂಕಿತರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT