ಶನಿವಾರ, ಜೂಲೈ 11, 2020
22 °C

ದ.ಕ. ಆಡಳಿತದ ವಿರುದ್ಧ ಕಾಸರಗೋಡು ಬಿಜೆಪಿ ಹೋರಾಟ: ಬಿಜೆಪಿ vs‌ ಬಿಜೆಪಿ ಎಂದು ಕುಹಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ದಕ್ಷಿಣ ಕನ್ನಡ ಮತ್ತು ಕಾಸರಗೋಡು ನಡುವೆ ದೈನಂದಿನ ವ್ಯವಹಾರ, ಉದ್ಯೋಗಕ್ಕಾಗಿ ಸಂಚರಿಸುವವರಿಗೆ ಮುಕ್ತ  ಅವಕಾಶ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಕಾಸರಗೋಡು ಜಿಲ್ಲಾ ಘಟಕದ ಮುಖಂಡರು ಸೋಮವಾರ ತಲಪಾಡಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ವಿರುದ್ಧ ಪ್ರತಿಭಟನೆ ನಡೆಸಿದರು.

ಕಾಸರಗೋಡಿನಲ್ಲಿ ಕೋವಿಡ್–19 ಸೋಂಕು ಹೆಚ್ಚುತ್ತಿದ್ದ ವೇಳೆ ಉಭಯ ಜಿಲ್ಲೆಗಳ ತಲಪಾಡಿ ಗಡಿಯನ್ನು ಮುಚ್ಚಲಾಗಿತ್ತು. ಬಳಿಕ ಕೇರಳ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ವೈದ್ಯಕೀಯ ತುರ್ತು ಅವಶ್ಯಕತೆಗಳಿಗೆ ಸಂಚಾರದ ಅವಕಾಶ ಲಭಿಸಿತ್ತು. ಈಗ ಲಾಕ್‌ಡೌನ್ ಸಡಿಲಗೊಂಡರೂ ದಕ್ಷಿಣ ಕನ್ನಡ ಜಿಲ್ಲಾಡಳಿತವು ಸಂಚಾರಕ್ಕೆ ಅನುವು ಮಾಡಿಕೊಡದ ಪರಿಣಾಮ ಕಾಸರಗೋಡು ಬಿಜೆಪಿ ಪ್ರತಿಭಟನೆ ನಡೆಸಿತ್ತು.

ಕುಂಜತ್ತೂರಿನಿಂದ ಕಾಲ್ನಡಿಗೆಯಲ್ಲಿ ತಲಪಾಡಿಗೆ ಹೊರಟ ಕಾಸರಗೋಡು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀಕಾಂತ್ ಮತ್ತಿತರರನ್ನು ದಾರಿ ಮಧ್ಯೆ ಪೊಲೀಸರು ತಡೆದರು. ಬಳಿಕ ತಲಪಾಡಿ ಚೆಕ್‌ಪೋಸ್ಟ್ ಬಳಿ ಬಂದ ಪ್ರತಿಭಟನಾಕಾರರು ದ.ಕ. ಜಿಲ್ಲಾಡಳಿತದ ಧೋರಣೆಯನ್ನು ಟೀಕಿಸಿದರು.

ಬಿಜೆಪಿ ಮುಖಂಡ ಕೋಟ ಶ್ರೀನಿವಾಸ ಪೂಜಾರಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾರೆ. ಹೀಗಾಗಿ ಬಿಜೆಪಿ ಕಾಸರಗೋಡು ಜಿಲ್ಲಾ ಘಟಕದ ಪ್ರತಿಭಟನೆಯನ್ನು ‘ಬಿಜೆಪಿ ವರ್ಸಸ್‌ ಬಿಜೆಪಿ’ ಎಂದು ಸಾರ್ವಜನಿಕರು ವಿಡಂಬನೆ ಮಾಡಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು