ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಸರಗೋಡು: 147 ಜನರಿಗೆ ಸೋಂಕು

Last Updated 11 ಆಗಸ್ಟ್ 2020, 16:27 IST
ಅಕ್ಷರ ಗಾತ್ರ

ಮಂಗಳೂರು: ನೆರೆಯ ಕಾಸರಗೋಡು ಜಿಲ್ಲೆಯಲ್ಲಿ 147 ಜನರಿಗೆ ಕೋವಿಡ್‌–19 ಸೋಂಕು ತಗುಲಿರುವುದು ಮಂಗಳವಾರ ದೃಢಪಟ್ಟಿದೆ.

‘ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದ 143 ಜನರು ಹಾಗೂ ಹೊರ ರಾಜ್ಯಗಳಿಂದ ವಾಪಸಾಗಿರುವ ಇಬ್ಬರಲ್ಲಿ ಕೋವಿಡ್‌ ಪತ್ತೆಯಾಗಿದೆ. ಉಳಿದ ಇಬ್ಬರಿಗೆ ಯಾವ ಮೂಲದಿಂದ ಸೋಂಕು ತಗುಲಿದೆ ಎಂಬುದನ್ನು ಪತ್ತೆಮಾಡಲಾಗುತ್ತಿದೆ’ ಎಂದು ಕಾಸರಗೋಡು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎ.ವಿ.ರಾಮದಾಸ್‌ ತಿಳಿಸಿದ್ದಾರೆ.

266 ಮಂದಿ ಗುಣಮುಖ:

ಕಾಸರಗೋಡು ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 266 ಜನರು ಕೋವಿಡ್‌ ಸೋಂಕಿನಿಂದ ಗುಣಮುಖರಾಗಿರುವುದು ಮಂಗಳವಾರ ಖಚಿತಪಟ್ಟಿದೆ. ಅವರನ್ನು ಆಸ್ಪತ್ರೆಗಳಿಂದ ಬಿಡುಗಡೆ ಮಾಡಿ, ಮನೆಗಳಿಗೆ ಕಳುಹಿಸಲಾಗಿದೆ ಎಂದು ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT