ಭಾನುವಾರ, ಜುಲೈ 25, 2021
21 °C

ಕಾಸರಗೋಡು: ನಾಲ್ವರಲ್ಲಿ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಕೇರಳದ ಗಡಿ ಜಿಲ್ಲೆ ಕಾಸರಗೋಡಿನ ನಾಲ್ವರಿಗೆ ಕೋವಿಡ್‌–19 ಸೋಂಕು ತಗುಲಿರುವುದು ಶುಕ್ರವಾರ ದೃಢಪಟ್ಟಿದೆ.

ಸೋಂಕಿತರು ಮೀಂಜ, ಉದುಮ ಮತ್ತು ಚೆಮ್ನಾಡ್‌ ಪಂಚಾಯಿತಿ ವ್ಯಾಪ್ತಿಯವರು. ಇಬ್ಬರು ವಿದೇಶದಿಂದ ಬಂದವರು ಮತ್ತು ಇಬ್ಬರು ಮಹಾರಾಷ್ಟ್ರದಿಂದ ಹಿಂದಿರುಗಿದ್ದವರು. ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕಾಸರಗೋಡು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್‌ ತಿಳಿಸಿದ್ದಾರೆ.

ವಲಿಯಪರಂಬ, ಮಂಗಲ್ಪಾಡಿ, ಪುಲ್ಲೂರು– ಪೆರಿಯ ಮತ್ತು ಕಾರಡ್ಕದ ತಲಾ ಒಬ್ಬರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಕಾಸರಗೋಡು ಜಿಲ್ಲೆಯ 108 ಸೋಂಕಿತರು ಇನ್ನೂ ಆಸ್ಪತ್ರೆಯಲ್ಲಿದ್ದಾರೆ. ಈ ಪೈಕಿ 93 ಮಂದಿ ಕಾಸರಗೋಡಿನಲ್ಲಿ ಮತ್ತು 15 ಮಂದಿ ಕಣ್ಣೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು