ಕಾಸರಗೋಡು: ಇಲ್ಲಿನ ಕಾಸರಗೋಡು ಮೆಡಿಕಲ್ ಕಾಲೇಜು ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ರಾಜ್ಯ ಸರ್ಕಾರ ₹56 ಕೋಟಿ ಮಂಜೂರುಮಾಡಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದರು.

4 ತಿಂಗಳ ಅವಧಿಯಲ್ಲಿ ಕಾಲೇಜಿನ 4 ಕಟ್ಟಡಗಳ ನಿರ್ಮಾಣ ಪೂರ್ಣಗೊಳ್ಳಲಿದೆ ಎಂದು ಉಕ್ಕಿನಡ್ಕದಲ್ಲಿರುವ ಮೆಡಿಕಲ್ ಕಾಲೇಜಿನ ಪ್ರವೇಶೋತ್ಸವವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

ಹಾಸ್ಟೆಲ್ ಕಟ್ಟಡ ನಿರ್ಮಾಣಗೊಂಡ ತಕ್ಷಣ ಚೆರ್ಕಳದಲ್ಲಿರುವ ಹಾಸ್ಟೆಲ್ ಇಲ್ಲಿಗೆ ಸ್ಥಳಾಂತರಗೊಳ್ಳಲಿದೆ ಎಂದರು.

ಶಾಸಕ ಎನ್.ಎ. ನೆಲ್ಲಿಕುನ್ನು ಅಧ್ಯಕ್ಷತೆ ವಹಿಸಿದ್ದರು. ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಅತಿಥಿಯಾಗಿದ್ದರು. ಶಾಸಕರಾದ ಎ.ಕೆ.ಎಂ.ಅಶ್ರಫ್, ಸಿ.ಎಚ್.ಕುಂಞಂಬು, ಪ್ರಮುಖರಾದ ಚಂದ್ರನ್ ವಿ., ಕೆ.ವಿ.ವಿಶ್ವನಾಥನ್ ಭಾಗವಹಿಸಿದ್ದರು.

ಸಚಿವೆ ವೀಣಾ ಜಾರ್ಜ್ ಶುಕ್ರವಾರ ಆರಿಕ್ಕಾಡಿಯ ಕುಂಬಳೆ ಕುಟುಂಬ ಆರೋಗ್ಯ ಕೇಂದ್ರದ ಕಟ್ಟಡವನ್ನು ಉದ್ಘಾಟಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.