ಮೂಲ್ಕಿ: ಹಿಂದೂ ಸಾಂಪ್ರದಾಯಿಕ ಉಡುಗೆ ತೊಟ್ಟು ದೇವಸ್ಥಾನ ಪ್ರವೇಶಿಸಬೇಕು ಎಂದು ವಿನಂತಿಸಿ, ಕಟೀಲು ದುರ್ಗಾ ಪರಮೇಶ್ವರಿ ದೇವಾಲಯದಲ್ಲಿ ಫಲಕ ಹಾಕಲಾಗಿದೆ.

ಮುಜರಾಯಿ ಇಲಾಖೆಯಿಂದ ಅಧಿಕೃತವಾಗಿ ಯಾವುದೇ ಆದೇಶ ಬಂದಿಲ್ಲ. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎನ್ನುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ದೇವಸ್ಥಾನವು ಪವಿತ್ರವಾದ ಕ್ಷೇತ್ರ ಆಗಿರುವುದರಿಂದ ಭಕ್ತಿ, ಶ್ರದ್ಧೆಯ ಭಾವ ಇರಬೇಕು. ಈ ಕಾರಣಕ್ಕೆ ಅನೇಕ ದೇವಾಲಯಗಳಲ್ಲಿ ಈ ರೀತಿ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ ಎಂದು ದೇವಾಲಯದ ಮೂಲಗಳು ತಿಳಿಸಿವೆ.

ಈ ಕುರಿತು ಕಟೀಲು ಕ್ಷೇತ್ರದ ಅರ್ಚಕ ಹರಿನಾರಾಯಣದಾಸ ಆಸ್ರಣ್ಣ ಅವರ ಗಮನ ಸೆಳೆದಾಗ, ‘ಧಾರ್ಮಿಕ ಕ್ಷೇತ್ರದಲ್ಲಿ ಹಿಂದೂ ಸಂಪ್ರದಾಯದಂತೆ ಉಡುಗೆ-ತೊಡುಗೆಗಳು ಇರಬೇಕು ಎಂಬ ಉದ್ದೇಶದಿಂದ ಈ ವಿನಂತಿ ಮಾಡಲಾಗಿದೆ. ಇದು ವಿನಂತಿಯೇ ಹೊರತು ಕಡ್ಡಾಯವಲ್ಲ’ ಎಂದರು.

ಫಲಕ ಇಲ್ಲ: ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ದೇಗುಲಗಳಲ್ಲಿ ಈ ರೀತಿಯ ಕ್ರಮ ಜಾರಿಯಾಗಲಿದೆ ಎನ್ನಲಾಗಿದ್ದು, ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಇಂತಹ ಯಾವುದೇ ಫಲಕ ಹಾಕಲಾಗಿಲ್ಲ. ಈ ಕುರಿತು ಆಡಳಿತ ಮಂಡಳಿಗೆ ಯಾವುದೇ ನಿರ್ದೇಶನ ಬಂದಿಲ್ಲ ಎಂದು ದೇವಾಲಯದ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.