ಕಾಪು (ಪಡುಬಿದ್ರಿ): ಕಾಪು ಪ್ರಜಾಸೌಧ ಆವರಣದಲ್ಲಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ಕಟ್ಟಡವನ್ನು ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶನಿವಾರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹಸಿವು ಮುಕ್ತ ಕರ್ನಾಟಕವಾಗಬೇಕೆಂಬ ದೃಷ್ಟಿಯಲ್ಲಿ ಮಹತ್ವಾಕಾಂಕ್ಷಿ ಯೋಜನೆಯನ್ನು ಸರ್ಕಾರ ಜಾರಿ ಮಾಡಿದೆ. ಹಸಿದವರಿಗೆ ಮಾತ್ರ ಅನ್ನದ ಬೆಲೆ ಗೊತ್ತಿರುತ್ತದೆ. ರಾಜ್ಯದಲ್ಲಿ ಯಾರೂ ಹಸಿದಿರಬಾರದು ಎಂಬ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸಿನ ಕೂಸು ಎಂದರು.

ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ, ಜಿಲ್ಲಾ ಪಂಚಾಯಿತಿ ಸಿಇಒ ಪ್ರತೀಕ್ ಬಾಯಲ್, ತಹಸೀಲ್ದಾರ್ ಪ್ರತಿಭಾ ಆರ್, ಪುರಸಭೆ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷೆ ಸರಿತಾ ಶಿವಾನಂದ, ಮುಖ್ಯಾಧಿಕಾರಿ ನಾಗರಾಜ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ. ಸುಕುಮಾರ್ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.