ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಕವತ್ತಾರು: ಟೆಂಪೊ ಡಿಕ್ಕಿ– ಬೈಕ್‌ ಸವಾರ ಸಾವು

Published 28 ಮೇ 2024, 5:37 IST
Last Updated 28 ಮೇ 2024, 5:37 IST
ಅಕ್ಷರ ಗಾತ್ರ

ಮೂಲ್ಕಿ: ಇಲ್ಲಿಗೆ ಸಮೀಪದ ಕವತ್ತಾರು ಕೊರಗಜ್ಜನ ಗುಡಿ ಬಳಿ ಟೆಂಪೊ ಡಿಕ್ಕಿ ಹೊಡೆದು ಬೈಕ್ ಸವಾರರೊಬ್ಬರು ಸೋಮವಾರ ಮೃತಪಟ್ಟಿದ್ದಾರೆ. 

ಮೃತರನ್ನು ಕರ್ನಿರೆಯ ಸಂತೋಷ್ ಎಂದು ಗುರುತಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

‘ಸಂತೋಷ್ ಅವರು ಕರ್ನಿರೆ ಕಡೆಯಿಂದ ಮೂಲ್ಕಿ ಕಡೆಗೆ ಬುಲೆಟ್‌ ಬೈಕಿನಲ್ಲಿ ತೆರಳುತ್ತಿದ್ದಾಗ ಕರ್ನಿರೆ ಕಡೆಗೆ ಸಾಗುತ್ತಿದ್ದ ಟೆಂಪೊ ಎದುರು ಬಂತು. ಎರಡೂ ವಾಹನಗಳು ವೇಗವಾಗಿ ಚಲಿಸುತ್ತಿದ್ದವು. ಬ್ರೇಕ್‌ ಹಾಕಿ ಬೈಕ್‌ ಅನ್ನು ನಿಯಂತ್ರಣಕ್ಕೆ ತರಲು ಯತ್ನಿಸಿದ ಸಂತೋಷ್‌  ಆಯತಪ್ಪಿ ರಸ್ತೆಗೆ ಬಿದ್ದರು. ಆಗ ಟೆಂಪೊದ ಹೆಡ್‌ಲೈಟ್‌ ಅವರ ತಲೆಗೆ ಬಡಿದಿತ್ತು. ಗಾಯಾಳುವನ್ನು ಮುಕ್ಕಾದ ಶ್ರೀನಿವಾಸ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲೇ ಅವರು ಅಸುನೀಗಿದ್ದರು ಎಂಬುದಾಗಿ ಸ್ಥಳೀಯ ನಿವಾಸಿ ರಂಜನ್ ದೂರು ನೀಡಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.

ನಗರ ಸಂಚಾರ ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT