ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹1.40 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Last Updated 8 ಫೆಬ್ರುವರಿ 2023, 6:55 IST
ಅಕ್ಷರ ಗಾತ್ರ

ಮಂಗಳೂರು: ‘ಕುಂಜತ್ತಬೈಲ್ ನಿವಾಸ’ ಮನೆಯಿಂದ ಚಿನ್ನಾಭರಣ ಕಳವಾದ ಬಗ್ಗೆ ಕಾವೂರು ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

‘ಸೋಮವಾರ ಬೆಳಿಗ್ಗೆ 8-30 ಗಂಟೆಯಿಂದ ಸಂಜೆ 6-30ರ ನಡುವೆ ಹಿಂಬಾಗಿಲ ಚಿಲಕವನ್ನು ಒಡೆದು ಕಳ್ಳರು ಮನೆಗೆ ಪ್ರವೇಶಿಸಿದ್ದಾರೆ. ಮಲಗುವ ಕೋಣೆಯ ಕಪಾಟನ್ನು ಒಡೆದು ಅದರಲ್ಲಿದ್ದ 4 ಪವನ್ ತೂಕದ ಚಿನ್ನದ ಸರ (ಅಂದಾಜು ಮೌಲ್ಯ ₹ 80 ಸಾವಿರ), 3 ಪವನ್ ತೂಕದ ಚಿನ್ನದ ಜೋಮಾಲೆಯನ್ನು (ಅಂದಾಜು ಮೌಲ್ಯ ₹ 60 ಸಾವಿರ ) ಕದ್ದೊಯ್ದಿದ್ದಾರೆ. ಕಳವಾದ ಸೊತ್ತುಗಳ ಅಂದಾಜು ಮೌಲ್ಯ ₹ 1.40 ಲಕ್ಷ ಎಂದು ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT