ಗುರುವಾರ , ಜೂನ್ 24, 2021
27 °C

ಕರ್ಣಾಟಕ ಬ್ಯಾಂಕ್‌ಗೆ ಇಬ್ಬರು ಹೆಚ್ಚುವರಿ ನಿರ್ದೇಶಕರ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಕರ್ಣಾಟಕ ಬ್ಯಾಂಕ್‌ಗೆ ನ್ಯಾ ಎ.ವಿ. ಚಂದ್ರಶೇಖರ್ ಹಾಗೂ ಪ್ರದೀಪ್‌ಕುಮಾರ್ ಪಂಜ ಅವರನ್ನು ಹೆಚ್ಚುವರಿ ನಿರ್ದೇಶಕರನ್ನಾಗಿ ಬುಧವಾರ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ನೇಮಕ ಮಾಡಲಾಗಿದೆ.

ನ್ಯಾ.ಎ.ವಿ. ಚಂದ್ರಶೇಖರ್ ಹೈಕೋರ್ಟ್‌ ನ್ಯಾಯಮೂರ್ತಿಗಳಾಗಿ ನಿವೃತ್ತರಾಗಿದ್ದು, ಕರ್ನಾಟಕ ಆಡಳಿತಾತ್ಮಕ ನ್ಯಾಯಾಲಯದ (ಕೆಎಸ್‍ಎಟಿ) ಸದಸ್ಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರದೀಪ್ ಕುಮಾರ್ ಪಂಜ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಕಾರ್ಪೊರೇಟ್ ಬ್ಯಾಂಕಿಂಗ್ ವಿಭಾಗದ ಆಡಳಿತ ನಿರ್ದೇಶಕರಾಗಿ (ಎಂಡಿ) 2015ರಲ್ಲಿ ನಿವೃತ್ತರಾಗಿದ್ದಾರೆ. ಸದ್ಯ ವಿವಿಧ ಕಂಪನಿಗಳ ಆಡಳಿತ ನಿರ್ದೇಶಕರ ಮಂಡಳಿಯ ಸದಸ್ಯರಾಗಿದ್ದಾರೆ.

ಇಬ್ಬರು ನೂತನ ನಿರ್ದೇಶಕರ ನೇಮಕ ಕುರಿತು ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ, ಸಿಇಓ ಮಹಾಬಲೇಶ್ವರ ಎಂ.ಎಸ್. ಸಂತಸ ವ್ಯಕ್ತಪಡಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು