ಸೋಮವಾರ, 29 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ಣಾಟಕ ಬ್ಯಾಂಕ್‌ ಮಾಜಿ ಅಧ್ಯಕ್ಷ ಅನಂತ ಕೃಷ್ಣ ನಿಧನ

Last Updated 11 ಅಕ್ಟೋಬರ್ 2020, 11:01 IST
ಅಕ್ಷರ ಗಾತ್ರ

ಮಂಗಳೂರು: ಕರ್ಣಾಟಕ ಬ್ಯಾಂಕಿನ ಮಾಜಿ ಅಧ್ಯಕ್ಷ ಅನಂತಕೃಷ್ಣ (74) ಅವರು ಭಾನುವಾರ ಬೆಳಿಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

1946 ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಜನಿಸಿದ ಅನಂತಕೃಷ್ಣ ಅವರು, ಬಂಟ್ವಾಳ ಎಸ್.ವಿ.ಎಸ್. ಹೈಸ್ಕೂಲ್‌ ಮತ್ತು ನಗರದ ಸೇಂಟ್‌ ಅಲೋಶಿಯಸ್ ಕಾಲೇಜಿನಲ್ಲಿ ಓದಿದ್ದರು. ಮೈಸೂರು ವಿಶ್ವವಿದ್ಯಾಲಯದಿಂದ ಗಣಿತ ಶಾಸ್ತ್ರದಲ್ಲಿ ಎಂ.ಎಸ್ಸಿ ಪದವಿ ಪಡೆದಿದ್ದರು.
ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿದ ಅವರು. ಮೊಡಂಕಾಪು ದೀಪಿಕಾ ಹೈಸ್ಕೂಲ್‌ ಮತ್ತು ಮಣಿಪಾಲದ ಎಂಐಟಿಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ನಂತರ ಹಿಂದೂಸ್ತಾನ್‌ ಎರೊನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ಸೇರಿದ್ದರು.

1971ರಲ್ಲಿ ಕರ್ಣಾಟಕ ಬ್ಯಾಂಕ್‌ನಲ್ಲಿ ಉದ್ಯೋಗ ಆರಂಭಿಸಿದ್ದರು. ಬ್ಯಾಂಕ್‌ನಲ್ಲಿ ಪ್ರಮುಖ ಹುದ್ದೆಗಳನ್ನು ನಿಭಾಯಿಸಿದ್ದ ಅವರು, 1994ರಲ್ಲಿ ಮಹಾ ಪ್ರಬಂಧಕರಾಗಿ ಪದೋನ್ನತಿ ಹೊಂದಿದ್ದರು. 1998ರಲ್ಲಿ ಮುಖ್ಯ ಮಹಾಪ್ರಬಂಧಕರಾಗಿ, 2000 –2009 ರವರೆಗೆ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಬಳಿಕ ಕಾರ್ಯ ನಿರ್ವಾಹಕೇತರ ಅಧ್ಯಕ್ಷರಾಗಿ ನಿರಂತರ ಸೇವೆ ಸಲ್ಲಿಸಿ, 2016 ರಲ್ಲಿ ನಿವೃತ್ತಿಯಾಗಿದ್ದರು.

ಅವರಿಗೆ ಪತ್ನಿ ರೇಣುಕಾ ಹಾಗೂ ಪುತ್ರ ಅವಿನಾಶ್ ಇದ್ದಾರೆ. ಬಿಜೈನ ದೀಪಾ ಆರ್ಕೆಡ್‌ನಲ್ಲಿ ಅವರ ಪಾರ್ಥಿವ ಶರೀರಕ್ಕೆ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು. ನಂತರ ಬೋಳೂರು ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT