ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯೆಂದು ಕರೆಸಿಕೊಂಡಿದ್ದು, ಒಂದೇ ಯುನಿಟ್ ಎಂದು ಪರಿಗಣಿಸುವಂತೆ ಕೆನರಾ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ ಸರ್ಕಾರಕ್ಕೆ ಮನವಿ ಮಾಡಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು 1997ರಲ್ಲಿ ವಿಭಜನೆ ಮಾಡಲಾಗಿದೆ. ಆದರೆ, ವಾಣಿಜ್ಯ ಚಟುವಟಿಕೆ ಹಾಗೂ ಇನ್ನಿತರ ದಿನನಿತ್ಯದ ವ್ಯವಹಾರಗಳಿಗೆ ಸಂಬಂಧಿಸಿದಂತೆ ಒಂದೇ ಜಿಲ್ಲೆಯಂತೆ ಕಾರ್ಯನಿರ್ವಹಿಸುತ್ತಿವೆ. ಆದರೆ, ಲಾಕ್ಡೌನ್ ಬಳಿಕ ಎರಡು ಜಿಲ್ಲೆಗಳ ನಡುವಿನ ಜನಸಂಚಾರವನ್ನು ಅಧಿಕಾರಿಗಳು ಪ್ರತ್ಯೇಕವಾಗಿ ವಿಂಗಡಿಸಿ, ಎರಡು ಜಿಲ್ಲೆಗಳ ನಡುವೆ ಸಂಪರ್ಕ ಇಲ್ಲದಂತೆ ಮಾಡಿದ್ದಾರೆ. ಇದರಿಂದ ಅವಿಭಜಿತ ಜಿಲ್ಲೆಯ ಜನರ ನಿತ್ಯದ ವ್ಯವಹಾರಗಳಿಗೆ ಅಡಚಣೆಯಾಗಿದೆ. ಈ ಬಗ್ಗೆ ಸರ್ಕಾರ ಗಮನಹರಿಸುವಂತೆ ಆಗ್ರಹಿಸಿದೆ.

ಲಾಕ್ಡೌನ್ ಸಂದರ್ಭದಲ್ಲಿ ರಾಜ್ಯದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ಒಂದು ಯುನಿಟ್ ಆಗಿ ಪರಿಗಣಿಸಿ ಆದೇಶ ಮಾಡಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ವಾಣಿಜ್ಯ ಮತ್ತು ಕೈಗಾರಿಕಾ ಚಟುವಟಿಕೆ ಹಾಗೂ ಜನರ ದಿನನತ್ಯದ ಖಾಸಗಿ ವಾಹನಗಳ ಸಂಚಾರಕ್ಕೆ ಒಂದು ಘಟಕವಾಗಿ ಪರಿಗಣಿಸಬೇಕಾಗಿತ್ತು ಎಂದು ತಿಳಿಸಿದೆ.

ಸರ್ಕಾರ ಈ ಬಗ್ಗೆ ಪ್ರತ್ಯೇಕ ಆದೇಶ ಮಾಡದೇ ಇರುವುದರಿಂದ ಎರಡು ಜಿಲ್ಲೆಗಳಲ್ಲಿ ಸಂಚಾರ ಮಾಡುತ್ತಿದ್ದ ಕಾರ್ಮಿಕರು, ಖಾಸಗಿ ಉದ್ಯಮಿಗಳಿಗೆ ಸಮಸ್ಯೆಯಾಗಿದೆ. ಈ ಬಗ್ಗೆ ಸರ್ಕಾರ ತಕ್ಷಣ ಗಮನಹರಿಸಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯನ್ನು ಒಂದು ಘಟಕವಾಗಿ ಪರಿಗಣಿಸಿ, ದೈನಂದಿನ ವ್ಯವಹಾರಗಳಿಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಐಸಕ್ ವಾಜ್ ಅವರು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.