ಮೂಡುಬಿದಿರೆ: ಅಕ್ರಮ-ಸಕ್ರಮ ಸಮಿತಿ, ಆಶ್ರಯ ಸಮಿತಿ ರಚನೆಯಾಗಿ ಎರಡು ವರ್ಷ ಸಮೀಪಿಸುತ್ತಿದ್ದರೂ ಸಭೆ ನಡೆಸಿಲ್ಲ. ಕೆಡಿಪಿ ಸಭೆ ನಡೆಯದೆ ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಹತ್ತು ದಿನಗಳೊಳಗ ಕೆಡಿಪಿ ಸಭೆ ಕರೆಯಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಆಗ್ರಹಿಸಿದರು.

ಇಲ್ಲಿನ ತಾಲ್ಲೂಕು ಕಚೇರಿ ಮುಂಭಾಗದ ಶುಕ್ರವಾರ ನಡೆದ ಕಾಂಗ್ರೆಸ್ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರದ ವಿದ್ಯುತ್ ಮಾರ್ಗ (400 ಕೆ.ವಿ ಯುಕೆಟಿಎಲ್) ಕಾಮಗಾರಿಯ ಗುತ್ತಿಗೆ ಪಡೆದಿರುವ ಸ್ಟೆರ್ ಲೈಟ್ ವಿದ್ಯುತ್ ಕಂಪನಿಯು ತಾಲ್ಲೂಕಿನ ಕೆಲವೆಡೆ ರೈತರ ಮೇಲೆ ದೌರ್ಜನ್ಯ ನಡೆಸುತ್ತಿದೆ. ಕೇಂದ್ರ ಸರ್ಕಾರದ ಬಲ ಇದೆ ಎಂದು ರೈತರ ಮೇಲೆ ದಬ್ಬಾಳಿಕೆ ನಡೆಸಿದರೆ ಕಾಂಗ್ರೆಸ್ ಸುಮ್ಮನಿರುವುದಿಲ್ಲ ಎಂದು ಎಚ್ಚರಿಸಿದರು.

ಬಿಜೆಪಿಯ ಪ್ರಮುಖರೊಬ್ಬರು ಹಸಿರು ಶಾಲು ಹಾಕಿಕೊಂಡು ರೈತ ಮುಖಂಡನಂತೆ ನಟಿಸಿ ಅಮಾಯಕ ರೈತರೊಂದಿಗೆ ನಾಟಕವಾಡುತ್ತಿದ್ದಾರೆ. ಹಸಿರು ಶಾಲು ಹಾಕಿದ ಮಾತ್ರಕ್ಕೆ ಎಲ್ಲರೂ ರೈತರಾಗುವುದಿಲ್ಲ ಎಂದರು.

ಪ್ರತಿಭಟನೆಯಲ್ಲಿ ಮುಖಂಡ ಕಾಂಗ್ರೆಸ್ ಕೆ.ಅಭಯಚಂದ್ರ ಜೈನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಕುಮಾರ್, ಕಾರ್ಯದರ್ಶಿ ಪುರಂದರ ದೇವಾಡಿಗ, ಮೂಡಾ ಅಧ್ಯಕ್ಷ ಹರ್ಷವರ್ಧನ ಪಡಿವಾಳ್, ಕೆಪಿಸಿಸಿ ವಕ್ತಾರ ಪದ್ಮಪ್ರಸಾದ್ ಜೈನ್, ಬ್ಲಾಕ್ ಕಾಂಗ್ರೆಸ್ ವಕ್ತಾರ ರಾಜೇಶ್ ಕಡಲಕೆರೆ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಪ್ರಿಯಾ ಡಿ.ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಅನೀಶ್ ಡಿಸೋಜ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.