ಮಂಗಳೂರು: ಕ್ರಿ.ಶ. 1837ರಲ್ಲಿಯೇ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ರಣಕಹಳೆ ಮೊಳಗಿಸಿದ ಸ್ವಾತಂತ್ರ್ಯ ಸಮರವೀರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ಹಾಗೂ ವೇದಿಕೆ ಕಾರ್ಯಕ್ರಮವನ್ನು ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿಯ ಸಹಭಾಗಿತ್ವದಲ್ಲಿ ವಿಜೃಂಭಣೆಯಿಂದ ನೆರವೇರಿಸಲಾಗುವುದು. ಅದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದರು.

ಮಂಗಳವಾರ ಇಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ನ.19ರಂದು ಮಂಗಳೂರಿನ ಬಾವುಟಗುಡ್ಡೆಯಲ್ಲಿ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆಯಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ಯಕ್ರಮಕ್ಕೆ ಬರಲಿದ್ದು, ಸಿದ್ಧತೆಗಳು ಅಚ್ಚುಕಟ್ಟಾಗಿ ನಡೆಯಬೇಕು. ಕನಿಷ್ಠ 25 ಸಾವಿರ ಜನರು ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆಗಳಿದ್ದು, ಸಂಬಂಧಿಸಿದ ಇಲಾಖೆಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ವೇದಿಕೆ ಸಿದ್ಧತೆ, ಊಟೋಪಚಾರ, ಕುಡಿಯುವ ನೀರು, ಶೌಚಾಲಯ, ಸಾರಿಗೆ, ಆಮಂತ್ರಣ ಸೇರಿದಂತೆ ಇತರೆ ವ್ಯವಸ್ಥೆಗಳನ್ನು ಮಾಡಿಕೊಳ್ಳುವಂತೆ ಅವರು ಸೂಚಿಸಿದರು.

ಕೆದಂಬಾಡಿ ರಾಮಯ್ಯ ಗೌಡರ ಅಭಿಮಾನಿ ಬಳಗ ದೊಡ್ಡದಿದೆ. ಅವರ ಹಾಗೂ ಅಮರ ಸುಳ್ಯ ಸಮರದ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ‘ಯಕ್ಷ ರಂಗಾಯಣ’ದಿಂದ ರಾಜ್ಯದಾದ್ಯಂತ ನಾಟಕ ಪ್ರದರ್ಶನಗಳನ್ನು ಮಾಡಲಾಗಿದೆ ಎಂದರು.

ಮಂಗಳೂರು ಮೇಯರ್ ಜಯಾನಂದ ಅಂಚನ್, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಇದ್ದರು.

ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಸ್ಮಾರಕ ಉಸ್ತುವಾರಿ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.