ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ 19ರಂದು ಲೋಕಾರ್ಪಣೆ– ಸಿ.ಎಂ. ಭಾಗಿ

Last Updated 12 ನವೆಂಬರ್ 2022, 2:51 IST
ಅಕ್ಷರ ಗಾತ್ರ

ಮಂಗಳೂರು: ರೈತರ ಸೇನೆ ಕಟ್ಟಿ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆಯನ್ನು ಇದೇ 19ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದ ಸ್ವಾಮೀಜಿ ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ತಿಳಿಸಿದರು.

ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಶುಕ್ರವಾರ ಮಾತನಾಡಿದರು.

‘ಕಾರ್ಯಕ್ರಮದಲ್ಲಿ ಅಂದಾಜು 25,000ಕ್ಕೂ ಹೆಚ್ಚು ಜನರು ಭಾಗವಹಿಸುವರು. ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಅಂದು ಭೂಮಿಪೂಜೆ ನೆರವೇರಿಸಲಾಗುವುದು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಚಿವರು, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳ ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.

‘ಕಾರ್ಯಕ್ರಮದಲ್ಲಿ ಭಾಗವಹಿಸಲು ಬಸ್‌ ಹಾಗೂ ಇತರ ವಾಹನಗಳಲ್ಲಿ ಭಾರಿ ಸಂಖ್ಯೆಯಲ್ಲಿ ಜನ ಬರಲಿದ್ದಾರೆ. ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಬೇಕು. ಸಂಚಾರಕ್ಕೆ ತೊಂದರೆ ಆಗದಂತೆ ಎಚ್ಚರ ವಹಿಸಬೇಕು’ ಎಂದು ಸಂಚಾರ ವಿಭಾಗದ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.

ಮೇಯರ್ ಜಯಾನಂದ ಅಂಜನ್, ಉಪಮೇಯರ್‌ ಪೂರ್ಣಿಮಾ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್‌, ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯಗೌಡ ಸ್ಮಾರಕ ಉಸ್ತುವಾರಿ ಸಮಿತಿಯ ಅಧ್ಯಕ್ಷ ಕಿರಣ್ ಬುಡ್ಲೆ, ಪ್ರಧಾನ ಕಾರ್ಯದರ್ಶಿ ರಕ್ಷಿತ್, ಸಮಿತಿಯ ಆನಂದ್, ಸುರೇಶ್ ಬೈಲು, ಶರಣ್, ಭಾಸ್ಕರ್ ದೇವಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT