ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ ಗಡಿ ಬಂದ್ ಕುರಿತ ವದಂತಿ ನಂಬಬೇಡಿ: ಜಿಲ್ಲಾಧಿಕಾರಿ ಸಿಂಧೂ ಸ್ಪಷ್ಟನೆ

Last Updated 3 ಜುಲೈ 2020, 4:28 IST
ಅಕ್ಷರ ಗಾತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‌ ಸೋಂಕು ಹೆಚ್ಚುತ್ತಿರುವ ಕಾರಣದಿಂದ ಕೇರಳದ ಗಡಿಯನ್ನು ಬಂದ್‌ ಮಾಡಲಾಗಿದೆ ಎಂಬುದು ವದಂತಿಯಾಗಿದ್ದು, ಈ ಬಗ್ಗೆ ಯಾರೂ ಗಮನ ಕೊಡಬಾರದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸ್ಪಷ್ಟನೆ ನೀಡಿದ್ದಾರೆ.

ಆ ರೀತಿಯ ಯಾವುದೇ ಪ್ರಕ್ರಿಯೆ ನಡೆದಿಲ್ಲ. ಏನೇ ಇದ್ದರೂ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತದೆ. ಯಾರೂ ಗೊಂದಲ ಮೂಡಿಸುವ ಸುಳ್ಳು ಸುದ್ದಿ ಹರಡಬಾರದು ಎಂದು ಅವರು ತಿಳಿಸಿದ್ದಾರೆ.

ಲಾಕ್‌ಡೌನ್ ಆದೇಶ ರಾಜ್ಯ ಸರ್ಕಾರದಿಂದ ಆಗುವ ಪ್ರಕ್ರಿಯೆಯಾಗಿದ್ದು, ಸದ್ಯಕ್ಕೆ ಇರುವ ನಿಯಮಗಳಷ್ಟೇ ಪಾಲನೆ ಮಾಡಲಾಗುತ್ತಿದೆ. ಜುಲೈ 5ರಿಂದ ನಾಲ್ಕು ಭಾನುವಾರ ಕರ್ಫ್ಯೂ ಜಾರಿಯಲ್ಲಿರುತ್ತದೆ. ಆ ದಿನ ಅಗತ್ಯ ಸೇವೆಗಳಿಗಷ್ಟೇ ಅವಕಾಶ ನೀಡಲಾಗುತ್ತದೆ. ಈ ಬಗ್ಗೆ ಯಾವುದೇ ಬದಲಾವಣೆಗಳಿದ್ದಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಕಾಸರಗೋಡು ಜಿಲ್ಲಾಧಿಕಾರಿ ಸ್ಪಷ್ಟನೆ: ಕಾಸರಗೋಡು ಜಿಲ್ಲಾಡಳಿತ ಕೇರಳ ಗಡಿಯನ್ನು ಸಂಪರ್ಕಿಸುವ ರಾಜ್ಯದ ಎಲ್ಲ ರಸ್ತೆಗಳನ್ನು ಬಂದ್‌ ಮಾಡಿದೆ ಎಂಬ ಸುದ್ದಿ ಹರಿದಾಡುತ್ತಿದ್ದು, ಇದರಲ್ಲಿ ಸತ್ಯಾಂಶವಿಲ್ಲ ಎಂದು ಕಾಸರಗೋಡು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ತಿಳಿಸಿದ್ದಾರೆ.

ಗಡಿಯ ರಸ್ತೆಗಳನ್ನು ಮುಚ್ಚುವ ಬಗ್ಗೆ ಹೊಸದಾಗಿ ಜಿಲ್ಲಾಡಳಿತ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಲಾಕ್‌ಡೌನ್ ಆರಂಭದಲ್ಲಿ ಬಂದ್ ಮಾಡಿದ್ದ ರಸ್ತೆಗಳನ್ನು ಮಾತ್ರ ಈಗಲೂ ಬಂದ್ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT