ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಎಸ್‌ಡಬ್ಲ್ಯು ಇನ್‌ಫ್ರಾಸ್ಟ್ರಕ್ಚರ್‌ಗೆ ಕೇಣಿ ಬಂದರು

₹4,119 ಕೋಟಿ ಅಂದಾಜು ವೆಚ್ಚದ ಯೋಜನೆ
Published 17 ನವೆಂಬರ್ 2023, 20:43 IST
Last Updated 17 ನವೆಂಬರ್ 2023, 20:43 IST
ಅಕ್ಷರ ಗಾತ್ರ

ಮಂಗಳೂರು: ಜೆಎಸ್‌ಡಬ್ಲ್ಯು ಇನ್‌ಫ್ರಾಸ್ಟ್ರಕ್ಚರ್ ಸಂಸ್ಥೆಯು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲ್ಲೂಕಿನ ಕೇಣಿ ಬಂದರು ಅಭಿವೃದ್ಧಿಗೆ ಮುಂದಾಗಿದೆ. ₹4,119 ಕೋಟಿ ಅಂದಾಜು ವೆಚ್ಚದ ಯೋಜನೆ ಇದಾಗಿದೆ. 

ಈ ಸಂಬಂಧ ಜೆಎಸ್‌ಡಬ್ಲ್ಯು ಇನ್‌ಫ್ರಾಸ್ಟ್ರಕ್ಚರ್ ಸಂಸ್ಥೆಗೆ ರಾಜ್ಯ ಸರ್ಕಾರದ ಮೆರಿಟೈಮ್ ಬೋರ್ಡ್ ಲೆಟರ್‌ ಆಫ್‌ ಅವಾರ್ಡ್‌ ನೀಡಿದೆ.

ಸಾಗರ ಮೂಲಸೌಕರ್ಯಗಳ ವಿಸ್ತರಣೆ ಮತ್ತು ಬೆಳವಣಿಗೆಗೆ ಹೆಚ್ಚಿನ ಒತ್ತು ನೀಡಿ, ರಿಯಾಯಿತಿ ಒಪ್ಪಂದಕ್ಕೆ ಸಹಿ ಹಾಕಿದ ನಂತರ ರಾಜ್ಯದ ಕಡಲ ಮೂಲಸೌಕರ್ಯ ಮತ್ತು ವ್ಯಾಪಾರ ಗೇಟ್‌ವೇ  ಭಾಗವಾಗಿ ಕೇಣಿ ಬಂದರನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಆರಂಭಿಕ ಹಂತದಲ್ಲಿ ಬಂದರಿನ ಸಾಮರ್ಥ್ಯ 30 ಎಂಟಿಪಿಎ ಆಗಿರಲಿದೆ. ಡೀಪ್‌– ವಾಟರ್ ಗ್ರೀನ್‌ಫೀಲ್ಡ್ ಬಂದರು ಆಗಿ ಪರಿವರ್ತನೆಯಾದ ಮೇಲೆ ಆಮದು ಮತ್ತು ರಫ್ತು ವಹಿವಾಟಿಗೆ ಹೆಚ್ಚು ವೇಗ ಸಿಗುವ ಭರವಸೆ ಇದೆ, ಜತೆಗೆ ಸ್ಥಳೀಯ ಆರ್ಥಿಕತೆ ವೃದ್ಧಿಸಲಿದೆ’ ಎಂದು ಜೆಎಸ್‌ಡಬ್ಲ್ಯು ಇನ್‌ಫ್ರಾಸ್ಟ್ರಕ್ಚರ್‌ನ ಜಂಟಿ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಅರುಣ್ ಮಹೇಶ್ವರಿ ಹೇಳಿದ್ದಾರೆ.

ಪ್ರಸ್ತಾವಿತ ಯೋಜನೆಗೆ ಒಟ್ಟು ಎಂಟು ಕಿ.ಮೀ. ಉದ್ದದಲ್ಲಿ ರೈಲ್ವೆ ಮಾರ್ಗ ಅಭಿವೃದ್ಧಿಪಡಿಸಲಾಗುವುದು. ಕೇಣಿ ಬಂದರು ಅಭಿವೃದ್ಧಿಯಿಂದ ಬಳ್ಳಾರಿ, ಹೊಸಪೇಟೆ, ಹುಬ್ಬಳ್ಳಿ, ಕಲಬುರಗಿ ಮತ್ತಿತರ ಪ್ರದೇಶಗಳ ಕೈಗಾರಿಕೆಗಳಿಗೆ ಪುಷ್ಟಿ ಸಿಗುತ್ತದೆ. ಕರ್ನಾಟಕ ಮೆರಿಟೈಮ್ ನೀಡುವ ಮಾಹಿತಿ ಪ್ರಕಾರ, ಕರ್ನಾಟಕವು ಪ್ರಸ್ತುತ 44 ಎಂಟಿಪಿಎ ಸರಕುಗಳ ಒಳನಾಡು ಸಾಮರ್ಥ್ಯವನ್ನು ಹೊಂದಿದೆ ಮತ್ತು 2035ರ ವೇಳೆಗೆ 117 ಎಂಟಿಪಿಎಗೆ ಏರಿಕೆಯಾಗುವ ನಿರೀಕ್ಷೆಯಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT