ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳ್ತಂಗಡಿ: ಸ್ನಾನ ಗೃಹದಲ್ಲಿ ಕಾಳಿಂಗ ಸರ್ಪ ಪತ್ತೆ

Last Updated 15 ಮಾರ್ಚ್ 2021, 14:31 IST
ಅಕ್ಷರ ಗಾತ್ರ

ಉಜಿರೆ: ಬೆಳ್ತಂಗಡಿ ತಾಲ್ಲೂಕಿನ ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಮುಂಡಾಜೆ ಕಾಪು ರಕ್ಷಿತಾರಣ್ಯದ ಬದಿಯಲ್ಲಿರುವ ಮನೆಯ ಸ್ನಾನ ಗೃಹದಲ್ಲಿ ಸೋಮವಾರ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆಯಾಗಿದೆ.

ಚಾರ್ಮಾಡಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ ದೇವಕಿ ಅವರ ಮನೆಯಲ್ಲಿ ಕಾಳಿಂಗಸರ್ಪ ಕಂಡುಬಂದಿದೆ. ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಯಿತು.

ಉಪ ವಲಯ ಅರಣ್ಯಾಧಿಕಾರಿ ಭವಾನಿ ಶಂಕರ ನೇತೃತ್ವದಲ್ಲಿ ಸ್ನೇಕ್ ಅನಿಲ್ ಅವರು ಹತ್ತು ಅಡಿಗಿಂತಲೂ ಉದ್ದವಾದ ಕಾಳಿಂಗ ಸರ್ಪವನ್ನು ಸುರಕ್ಷಿತವಾಗಿ ಹಿಡಿದು, ರಕ್ಷಿತಾರಣ್ಯಕ್ಕೆ ಬಿಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT