ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಆಶಾ’ ಕಾರ್ಯಕರ್ತೆಯರ ಶ್ರಮದಿಂದ ಜನರಲ್ಲಿ ಆತ್ಮಸ್ಥೈರ್ಯ: ನಳಿನ್‌ ಕುಮಾರ್ ಕಟೀಲ್

ತೆಂಕಿಲದಲ್ಲಿ ಕಿಟ್ ವಿತರಣೆ
Last Updated 12 ಜೂನ್ 2021, 5:23 IST
ಅಕ್ಷರ ಗಾತ್ರ

ಪುತ್ತೂರು: ‘ಸಮಾಜವೇ ತನ್ನ ಕುಟುಂಬ ಎಂಬ ಚಿಂತನೆಯೊಂದಿಗೆ ಸೇವಾ ಕಾರ್ಯ ಮಾಡುತ್ತಿರುವ ಆಶಾ ಕಾರ್ಯಕರ್ತೆಯರ ಸೇವಾ ಮನೋಭಾವನೆ ಶ್ಲಾಘನಾರ್ಹವಾಗಿದೆ. ಸಮಾಜದ ಕಟ್ಟಕಡೆಯ ಜನರನ್ನು ತಲುಪಿ, ಅವರಲ್ಲಿ ವಿಶ್ವಾಸ ಮೂಡಿಸಿರುವ ಆಶಾ ಕಾರ್ಯಕರ್ತೆಯರ ಶ್ರಮದಿಂದ ಜನರ ಆತ್ಮಸ್ಥೈರ್ಯ ಹೆಚ್ಚಾಗಿದೆ’ ಎಂದು ಸಂಸದ ನಳಿನ್‌ಕುಮಾರ್ ಕಟೀಲ್ ಹೇಳಿದರು.

ಇಲ್ಲಿನ ತೆಂಕಿಲ ಸ್ವಾಮಿ ಕಲಾ ಮಂದಿರದಲ್ಲಿ ಶುಕ್ರವಾರ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಉಪಾಧ್ಯಕ್ಷ ಸಹಜ್ ರೈ ಬಳಜ್ಜ ಅವರ ನೇತೃತ್ವದ ‘ವಿಜಯ ಸಾಮ್ರಾಟ್’ ತಂಡದ ವತಿಯಿಂದ ಅವಿಭಜಿತ ತಾಲ್ಲೂಕುಗಳ ಸುಮಾರು 250ಕ್ಕೂ ಅಧಿಕ ಆಶಾ ಕಾರ್ಯಕರ್ತೆಯರಿಗೆ ಆಹಾರ ಸಾಮಗ್ರಿಗಳ ಕಿಟ್ ವಿತರಿಸಿ ಅವರು ಮಾತನಾಡಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ ಮಾತನಾಡಿದರು. ಬಿಜೆಪಿ ಮುಖಂಡರಾದ ಚಂದ್ರಶೇಖರ ರಾವ್ ಬಪ್ಪಳಿಗೆ, ಅರುಣ್ ಕುಮಾರ್ ವಿಟ್ಲ, ದಯಾನಂದ, ಉದಯ ಕುಮಾರ್, ಮಾಧವ ಭಾವೆ, ನವೀನ್ ಪಡ್ನೂರು, ವಿಜಯ ಸಾಮ್ರಾಟ್ ಸಂಘಟನೆಯ ಅಜಿತ್ ಹೊಸಮನೆ ಇದ್ದರು.

ವಿಜಯ ಸಾಮ್ರಾಟ್ ತಂಡದ ಮುಖ್ಯಸ್ಥ ಸಹಜ್ ರೈ ಬಳಜ್ಜ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಮೇಶ್ ನಾಯಕ್ ಸ್ವಾಗತಿಸಿದರು. ಆದರ್ಶ ಶೆಟ್ಟಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT