ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಕ್ಕೆ ಸುಬ್ರಹ್ಮಣ್ಯ: ರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ಕಿಟ್ ವಿತರಣೆ

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್‌ರಾಮ್ ಸುಳ್ಳಿ ನೇತೃತ್ವ
Last Updated 12 ಜೂನ್ 2021, 3:31 IST
ಅಕ್ಷರ ಗಾತ್ರ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್‌ರಾಮ್ ಸುಳ್ಳಿ ಅವರ ನೇತೃತ್ವದಲ್ಲಿ ಕಿಟ್ ವಿತರಣೆ ನಡೆಯಿತು.

‘ಕಡಬ ಹಾಗೂ ಸುಳ್ಯ ತಾಲ್ಲೂಕುಗಳಿಗೆ ಈಗಾಗಲೇ ನಾಲ್ಕು ಆಂಬುಲೆನ್ಸ್‌ಗಳನ್ನು ಉಚಿತವಾಗಿ ನೀಡಲಾಗಿದೆ. ಸಾರ್ವಜನಿಕರು ಇದರ ಉಪಯೋಗವನ್ನು ಪಡೆದುಕೊಳ್ಳುತ್ತಿದ್ದಾರೆ. ಸರ್ಕಾರದ ಆದೇಶದಂತೆ ‘ಸಿ’ ಗ್ರೇಡ್ ದೇವಸ್ಥಾನದ ಸಿಬ್ಬಂದಿಗೆ ಈಗಾಗಲೇ ಆಹಾರ ಸಾಮಗ್ರಿ ಕಿಟ್ ವಿತರಿಸಲಾಗಿದೆ. ದೇವಸ್ಥಾನದ ಸರ್ಪಸಂಸ್ಕಾರ ಸಿಬ್ಬಂದಿಗೆ ಕಿಟ್ ನೀಡಲಾಗಿದೆ. ಆಡಳಿತ ಮಂಡಳಿ ನಿರ್ಧಾರದಂತೆ ಸುಮಾರು 162 ರಿಕ್ಷಾ ಚಾಲಕರು ಹಾಗೂ 28 ಟ್ಯಾಕ್ಸಿ ಚಾಲಕರಿಗೆ ಆಹಾರದ ಕಿಟ್ ವಿತರಣೆ ನೀಡಲಾಗುತ್ತಿದೆ’ ಎಂದು ಅವರು ತಿಳಿಸಿದರು.

ಸಹಾಯಕ ಕಾರ್ಯ ನಿರ್ವಹಣಾಧಿಕಾರಿ ಪುಷ್ಪಲತಾ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶೋಭಾ ಗಿರಿಧರ್, ವನಜಾ ವಿ. ಭಟ್, ದೇವಸ್ಥಾನದ ಸಿಬ್ಬಂದಿ, ಸುಬ್ರಹ್ಮಣ್ಯ ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT