ಶುಕ್ರವಾರ, ಮಾರ್ಚ್ 24, 2023
22 °C

ಕಟ್ಟಡ ಕಾರ್ಮಿಕರಿಗೆ ಸುರಕ್ಷತಾ ಕಿಟ್ ವಿತರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಲಾಕ್‍ಡೌನ್ ಕಾರಣ ದಿಂದ ಸಂಕಷ್ಟಕ್ಕೆ ಒಳಗಾಗಿರುವ ಕಟ್ಟಡ ಕಾರ್ಮಿಕರಿಗೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ನೀಡಿದ ಸುರಕ್ಷತಾ ಮತ್ತು ನೈರ್ಮಲ್ಯೀಕರಣ ಕಿಟ್‌ ಅನ್ನು ಪದವಿನಂಗಡಿ ಕಟ್ಟಡ ನಿರ್ಮಾಣ ಸ್ಥಳದ 52 ಕಾರ್ಮಿಕರಿಗೆ ಹಿರಿಯ ಸಿವಿಲ್ ನ್ಯಾಯಾಧೀಶೆ ಎ.ಜೆ.ಶಿಲ್ಪಾ ಗುರುವಾರ ವಿತರಿಸಿದರು. 

ನ್ಯಾಯಾಧೀಶೆ ಎ.ಜೆ. ಶಿಲ್ಪಾ ಮಾತನಾಡಿ, ‘ಮಹಿಳೆಯರು ಮತ್ತು ಪುರುಷ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯ ವತಿಯಿಂದ ಪ್ರತ್ಯೇಕವಾಗಿ ಒದಗಿಸಿರುವ ಸುರಕ್ಷತಾ ಮತ್ತು ನೈರ್ಮಲ್ಯೀಕರಣ ಕಿಟ್‍ಗಳನ್ನು ಸದುಪಯೋಗಪಡಿಸಿಕೊಳ್ಳುವ ಜತೆಗೆ, ಕೆಲಸದ ಸ್ಥಳದಲ್ಲಿ ನೈರ್ಮಲ್ಯ ಮತ್ತು ವ್ಯಕ್ತಿಗತ ಅಂತರ ಕಾಪಾಡಿಕೊಂಡು ಆರೋಗ್ಯ ರಕ್ಷಿಸಿಕೊಳ್ಳಬೇಕು’ ಎಂದರು.

ಸಹಾಯಕ ಕಾರ್ಮಿಕ ಆಯುಕ್ತ ಕೆ.ಬಿ.ನಾಗರಾಜ್ ಮಾತನಾಡಿ, ‘ಕಾರ್ಮಿಕ ಇಲಾಖೆಯು ಕಟ್ಟಡ ಕಾರ್ಮಿಕರಿಗೆ ಪಂಚಣಿ, ಮದುವೆ, ಹೆರಿಗೆ, ಶಿಕ್ಷಣ, ವೈದ್ಯಕೀಯ ವೆಚ್ಚ ಮುಂತಾದ ಸೌಲಭ್ಯಗಳನ್ನು ನೀಡುತ್ತಿದೆ. ನೋಂದಾಯಿತ ಕಾರ್ಮಿಕರಿಗೆ ಕೋವಿಡ್ ಲಾಕ್‌ಡೌನ್ ಕಾರಣಕ್ಕೆ
₹ 3,000 ಮೊತ್ತವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲಾಗಿದೆ. ಎಲ್ಲ ಕಾರ್ಮಿಕರು ಸರ್ಕಾರದಿಂದ ಬಂದಿರುವ ಆಹಾರ ಮತ್ತು ಸುರಕ್ಷತಾ ಕಿಟ್‍ಗಳನ್ನು ಪಡೆದು, ಇಲ್ಲಿಯೇ ಇದ್ದು ಕೆಲಸ ನಿರ್ವಹಿಸಬೇಕು’ ಎಂದು ಹೇಳಿದರು.

ಕಾರ್ಮಿಕ ಅಧಿಕಾರಿ ವಿಲ್ಮಾ ತಾವ್ರೊ, ಹಿರಿಯ ಕಾರ್ಮಿಕ ನಿರೀಕ್ಷಕ ಅಮರೇಂದ್ರ, ಮೇರಿ ಡಯಾಸ್ ಮತ್ತು ವಿರೇಂದ್ರ ಕುಂಬಾರ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು