ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಂಗೆ: ಸರ್ಕಾರಿ ಪ್ರೌಢಶಾಲೆಯ ಬೆಳ್ಳಿಹಬ್ಬ ಸಂಭ್ರಮ

Last Updated 28 ನವೆಂಬರ್ 2022, 16:27 IST
ಅಕ್ಷರ ಗಾತ್ರ

ಬಂಟ್ವಾಳ: ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ನೀಡುವುದರ ಜೊತೆಗೆ ಅಲ್ಲಿನ ಶೈಕ್ಷಣಿಕ ಗುಣಮಟ್ಟ ಹೆಚ್ಚಳಕ್ಕೆ ಶಿಕ್ಷಕರ ನೇಮಕಾತಿ ಮತ್ತಿತರ ಬಗ್ಗೆ ಸರ್ಕಾರ ಹೆಚ್ಚಿನ ಕಾಳಜಿ ವಹಿಸುತ್ತಿದೆ ಎಂದು ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಹೇಳಿದರು.

ಇಲ್ಲಿನ ಬಿ.ಸಿ.ರೋಡ್‌ ಸಮೀಪದ ಕೊಡಂಗೆ ನೇತಾಜಿ ಸುಭಾಷ್ ಚಂದ್ರ ಬೋಸ್ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ನಡೆದ ಬೆಳ್ಳಿ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಸರ್ಕಾರಿ ಶಾಲೆ ಶಿಕ್ಷಣದ ಜೊತೆಗೆ ಮೂಲಸೌಕರ್ಯ ನೀಡಲು ಸರ್ಕಾರ ಮತ್ತು ನಾಗರಿಕರ ನೆರವು ಅಗತ್ಯ ಎಂದರು.

ಪುರಸಭಾಧ್ಯಕ್ಷ ಮಹಮ್ಮದ್ ಶರೀಫ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪದ್ಮಶ್ರೀ ಪ್ರಶಸ್ತಿ ವಿಜೇತ ಹರೇಕಳ ಹಾಜಬ್ಬ ಅವರನ್ನು ಸನ್ಮಾನಿಸಲಾಯಿತು. ನಿವೃತ್ತ ಮುಖ್ಯಶಿಕ್ಷಕ ಅಬ್ದುಲ್ ಸಲಾಂ ಧ್ವಜಾರೋಹಣ ನೆರವೇರಿಸಿದರು.
ಪುರಸಭಾ ಸದಸ್ಯ ಲುಕ್ಮಾನ ಬಂಟ್ವಾಳ್, ಮಹಮ್ಮದ್ ನಂದರಬೆಟ್ಟು, ಹಸೈನಾರ್ ತಾಳಿಪಡ್ಪು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಚಂದ್ರಪ್ರಕಾಶ ಶೆಟ್ಟಿ, ಮಿತ್ತಬೈಲು ಮಸೀದಿ ಧರ್ಮಗುರು ಆಶ್ರಫ್ ಪೈಝಿ, ವಕೀಲ ಅಶ್ವನಿ ಕುಮಾರ್ ರೈ, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ರೋಟರಿ ಕ್ಲಬ್ ಅಧ್ಯಕ್ಷ ಡಾ.ಗೋವರ್ಧನ್ ರಾವ್, ಪ್ರಮುಖರಾದ ಇಲ್ಯಾಸ್ ಮಹಮ್ಮದ್ ತುಂಬೆ, ಹನೀಫ್ ಗೋಳ್ತಮಜಲು, ಇಮ್ರಾನ್, ಸೈಯದ್ ಫಲುಲ್, ಮಹಮ್ಮದ್ ಡಿ.ಪಿ., ಎ.ಕೆ.ಇಕ್ಬಾಲ್, ಆಶ್ರಫ್ ಎಸ್.ಎಂ, ಅಮಾನುಲ್ಲಾ ಖಾನ್, ಹೈದರ್, ಶಾಹುಲ್ ಹಮೀದ್, ನಿವೃತ್ತ ಸೈನಿಕ ಸೂರ್ಯನಾರಾಯಣ ಪಿ, ಮುಖ್ಯಶಿಕ್ಷಕಿ ಸುಗುಣಮ್ಮ ಇದ್ದರು.

ಮುಖ್ಯಶಿಕ್ಷಕ ಸುಧೀರ್ ಕೆ. ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕ ಅಶೋಕ್ ಕುಮಾರ್ ಸ್ವಾಗತಿಸಿದರು. ಶಿಕ್ಷಕಿ ಗೀತಾ ವಂದಿಸಿದರು. ಶಿಕ್ಷಕ ಮಹೇಶ ಕರ್ಕೇರ ಮತ್ತು ಚಿತ್ರಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT