ಉಜಿರೆ: ಕೊಕ್ಕಡ ಗ್ರಾಮದ ಬಾರ್ ಒಂದರಲ್ಲಿ ಮದ್ಯ ಸೇವಿಸುವ ಸಮಯ ಹಣಕಾಸಿನ ವಿಚಾರದಲ್ಲಿ ನಾಲ್ವರು ಆರೋಪಿಗಳು ಹಲ್ಲೆ ಮಾಡಿದ್ದು, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಕ್ಕಡ ಗ್ರಾಮದ ಹೊಸಮನೆ ನಿವಾಸಿ ಅಕ್ಷಯ್ ಮಾರ್ಚ್ 29ರಂದು ರಾತ್ರಿ ಬಾರ್ನಲ್ಲಿ ಇದ್ದಾಗ ಯತೀಶ್ ಎಂಬಾತ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಣ ಕೊಡುವಂತೆ ಹೊರಗೆ ಎಳೆದುಕೊಂಡು ಗೋಗಿದ್ದ. ಬಾರ್ನ ಹಿಂಬದಿಯಲ್ಲಿ ಯತೀಶ್, ಧನುಷ್ ಭಂಡಾರಿ, ಶರತ್ ಭಂಡಾರಿ ಮತ್ತು ಪ್ರವೀಣ್ ಸೇರಿ ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿ ನೀಡಿದ್ದಾರೆ.

ಹಲ್ಲೆಗೊಳಗಾದ ಅಕ್ಷಯ್ ಧರ್ಮಸ್ಥಳ ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಆರೋಪಿಗಳಾದ ಯತೀಶ್, ಧನುಷ್ ಭಂಡಾರಿ, ಶರತ್ ಭಂಡಾರಿ ಮತ್ತು ಪ್ರವೀಣ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-29-483859479

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.