ಗುರುವಾರ , ಮೇ 6, 2021
22 °C
ಮುಖ್ಯ ಶಿಕ್ಷಕರಿಗೆ ರಜೆ: ವಿಚಾರಣೆಗೆ ಆದೇಶ

ಕೊಕ್ಕಡ: ಮಸೀದಿ ಉದ್ಘಾಟನೆಗೆ ವಿದ್ಯಾರ್ಥಿಗಳನ್ನು ಕರೆದೊಯ್ದ ಶಿಕ್ಷಕರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಬೆಳ್ತಂಗಡಿ ತಾಲ್ಲೂಕಿನ ಕೊಕ್ಕಡದ ಮಸೀದಿ ಉದ್ಘಾಟನೆಗೆ ಶಾಲಾ ಮಕ್ಕಳನ್ನು ಕರೆದೊಯ್ದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಭಾರ ಮುಖ್ಯ ಶಿಕ್ಷಕರನ್ನು 10 ದಿನ ರಜೆ ಮೇಲೆ ಕಳುಹಿಸಲಾಗಿದೆ. ಈ ಬಗ್ಗೆ ವಿಚಾರಣೆ ನಡೆಸಲು ಸಮಗ್ರ ಶಿಕ್ಷಣದ ಜಿಲ್ಲಾ ಉಪ ಯೋಜನಾ ಸಮನ್ವಯಾಧಿಕಾರಿಗೆ ಸೂಚನೆ ನೀಡಲಾಗಿದೆ.

ಕೊಕ್ಕಡದಲ್ಲಿ ನವೀಕರಣಗೊಂಡ ಮಸೀದಿಯ ಉದ್ಘಾಟನೆ ಮಾ.19ರಂದು ನಡೆದಿತ್ತು. ಕಾರ್ಯಕ್ರಮಕ್ಕೆ ಕೊಕ್ಕಡ ಪ್ರೌಢಶಾಲೆಯ ವಿದ್ಯಾರ್ಥಿಗಳನ್ನು ಶಿಕ್ಷಕರು ಕರೆದುಕೊಂಡು ಹೋಗಿದ್ದು, ಈ ಬಗ್ಗೆ ವಿವಾದ ಉಂಟಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿದೆ.

‘ಶಾಲಾ ಅವಧಿಯಲ್ಲಿ ಮಾರ್ಗಸೂಚಿ ಉಲ್ಲಂಘಿಸಿ ವಿದ್ಯಾರ್ಥಿಗಳನ್ನು ಮಸೀದಿ ಉದ್ಘಾಟನೆಗೆ ಕಳುಹಿಸಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಭಾರ ಮುಖ್ಯ ಶಿಕ್ಷಕ ದಿನೇಶ್‌ ಅವರನ್ನು 10 ದಿನ ರಜೆಯ ಮೇಲೆ ಕಳುಹಿಸಲಾಗಿದೆ. ವಿಚಾರಣಾ ವರದಿ ಬಂದ ನಂತರ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು’ ಎಂದು ಡಿಡಿಪಿಐ ಮಲ್ಲೇಸ್ವಾಮಿ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು