ಶುಕ್ರವಾರ, ಆಗಸ್ಟ್ 6, 2021
23 °C
ಜೀರ್ಣೋದ್ಧಾರ ಕಾಮಗಾರಿ ಪ್ರಗತಿಯಲ್ಲಿ

ಕೊಲ್ಲಿ ದೇವಸ್ಥಾನ: ಸುತ್ತು ಪೌಳಿ ಶಿಲಾಪೂಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳ್ತಂಗಡಿ: ತಾಲ್ಲೂಕಿನ ಮಿತ್ತಬಾಗಿಲು ಗ್ರಾಮದ ಕೊಲ್ಲಿ ದುರ್ಗಾದೇವಿ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿ ಪ್ರಗತಿಯಲ್ಲಿದೆ. ತೀರ್ಥ ಮಂಟಪ ಹಾಗೂ ಸುತ್ತು ಪೌಳಿಯ ಶಿಲಾಪೂಜೆ ಕಾರ್ಯಕ್ರಮ ಶನಿವಾರ ನಡೆಯಿತು.

ಉಜಿರೆ ಜನಾರ್ದನ ದೇವಸ್ಥಾನದ ಶರತ್ ಕೃಷ್ಣ ಪಡುವೆಟ್ನಾಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತಂಡವಾಗಿ ಕೆಲಸಗಳನ್ನು ನಿರ್ವಹಿಸಿದರೆ ಅದು ಹೊರೆಯಾಗುವುದಿಲ್ಲ. ಊರಿನ ದೇವಸ್ಥಾನದ ಅಭಿವೃದ್ಧಿ ಪ್ರತಿಯೊಬ್ಬನ ಜವಾಬ್ದಾರಿಯಾಗಿದೆ. ಪರಸ್ಪರ ಸಹಕಾರದ ಮುಂದುವರಿದರೆ ಕೆಲಸಗಳು ನಿರ್ವಿಘ್ನವಾಗಿ ಸಾಗುತ್ತವೆ ಹಾಗೂ ಯೋಜಿತ ಅವಧಿಯೊಳಗೆ ಪೂರ್ಣಗೊಳ್ಳುತ್ತವೆ ಎಂದು ಹೇಳಿದರು

ಜಮಾ ಉಗ್ರಾಣದ ಮುತ್ಸದ್ದಿ ಬಿ. ಭುಜಬಲಿ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಾಸುದೇವ ರಾವ್ ಕಕ್ಕೆನೇಜಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಲೋಕೇಶ್ ರಾವ್, ಮಿತ್ತಬಾಗಿಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲತಾ, ಕಡಿರುದ್ಯಾವರ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಶೋಕ್ ಕುಮಾರ್, ನಾವುರು ಗ್ರಾಮ ಪಂಚಾಯಿತಿ ಅಧ್ಯಕ್ಷ ಗಣೇಶ ಗೌಡ, ಬಂಗಾಡಿ ಸಿಎ ಬ್ಯಾಂಕಿನ ಅಧ್ಯಕ್ಷ ಹರೀಶ್ ಸಾಲಿಯಾನ್, ಉದ್ಯಮಿಗಳಾದ ಅರುಣ್ ಕುಮಾರ್ ದಿನೇಶ್ ಕುಮಾರ್, ಮುಖಂಡರಾದ ದಿನೇಶ್ ಗೌಡ, ಮೋಹನಗೌಡ, ಕೇಶವ ಫಡ್ಕೆ, ರಾಜಶೇಖರ್ ರಾವ್, ಮೃತ್ಯುಂಜಯ ರಾವ್, ವ್ಯವಸ್ಥಾಪನಾ ಸಮಿತಿಯ ಸದಸ್ಯರು ಇದ್ದರು.

ಬಿ. ಕೆ ಧನಂಜಯ ರಾವ್ ಕಾರ್ಯಕ್ರಮ ನಿರೂಪಿಸಿದರು.

ದೇವಾಲಯದ ತೀರ್ಥ ಮಂಟಪ ಗಣಪತಿ ಹಾಗೂ ದುರ್ಗಾಪರಮೇಶ್ವರಿ ಗುಡಿಗಳು ಹಾಗೂ ಇತರ ಕಾಮಗಾರಿ ಪೂರ್ಣಗೊಳ್ಳಬೇಕಾಗಿದೆ. ಕೆಲವು ತಿಂಗಳುಗಳ ಹಿಂದೆ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಭಜಕರ ಸಭೆ ನಡೆದಿದೆ. ದೇವಸ್ಥಾನ ವ್ಯಾಪ್ತಿಯ ಗ್ರಾಮಸ್ಥರು ಹಾಗೂ ಇತರರು ಸೇರಿ ಶ್ರಮದಾನದ ಮೂಲಕ ಕಾಮಗಾರಿಗಳನ್ನು ಭರದಿಂದ ನಿರ್ವಹಿಸುತ್ತಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.