ಬುಧವಾರ, ಮಾರ್ಚ್ 22, 2023
27 °C

ಕೊಲ್ಯ: ಕಾರು ಅಪಘಾತ– ಚಾಲಕ ಸ್ಥಳದಲ್ಲೇ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಳ್ಳಾಲ: ಕೊಲ್ಯ- ಅಡ್ಕ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭಾನುವಾರ ರಾತ್ರಿ ಸಂಭವಿಸಿದ  ಕಾರು ಅಪಘಾತದಲ್ಲಿ ಪ್ರಯಾಣಿಕರೊಬ್ಬರು ಮೃತಪಟ್ಟಿದ್ದಾರೆ. ಇನ್ನೊಬ್ಬ ಪ್ರಯಾಣಿಕ ಗಂಭೀರವಾಗಿ ಗಾಯಗೊಂಡಿದ್ದಾರೆ. 

ಮೃತರನ್ನು ಉಪ್ಪಳ ಹಿದಾಯತ್ ನಗರ ನಿವಾಸಿ ಬಷೀರ್‌ ಅಹಮ್ಮದ್ (22) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಪ್ರಯಾಣಿಕನ ಗುರುತು ಪತ್ತೆಯಾಗಿಲ್ಲ. ಕಾರಿನಲ್ಲಿದ್ದ ಕೇರಳ ಕಣ್ಣೂರು ನಿವಾಸಿ, ವೈದ್ಯ ವಿದ್ಯಾರ್ಥಿನಿ ಫಾತಿಮ ಹಾಗೂ ರೇವತಿ ಅವರಿಗೂ ಸಣ್ಣ ಪ್ರಮಾಣದ ಗಾಯಗಳಾಗಿವೆ. 

ಕಾರು ಕೊಲ್ಯ- ಅಡ್ಕ ಬಳಿ ರಸ್ತೆ ವಿಭಜಕವನ್ನು ಏರಿ, ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ಸಂಪೂರ್ಣ ನುಜ್ಜುಗುಜ್ಜಾಗಿದೆ. ಚಾಲಕ ಬಷಾರ ಅಹಮ್ಮದ್ ತಲೆ ಹಾಗೂ ದೇಹ ಜಜ್ಜಿಹೋಗಿದ್ದು, ಅವರು ಸ್ಥಳದಲ್ಲೇ ಅಸುನೀಗಿದ್ದಾರೆ‌. ಉಳಿದ ಮೂವರು ಗಾಯಾಳುಗಳನ್ನು ಸ್ಥಳೀಯರು ಕಾರಿನಿಂದ  ಹೊರ ತೆಗೆದು ಆಸ್ಪತ್ರೆಗೆ ಕರೆದೊಯ್ದರು. ಒಬ್ಬ ಯುವತಿಯನ್ನು ಕಾರಿನಲ್ಲಿ ಪ್ರಶಾಂತ್ ಗಟ್ಟಿ ಎಂಬವರು ಎ.ಜೆ ಆಸ್ಪತ್ರೆಗೆ ಕರೆದೊಯ್ದರು.  ಇನ್ನೊಬ್ಬ ಯುವತಿಯನ್ನು ಟೆಂಪೊ ಟ್ರಾವೆಲರ್‌ ವಾಹನದಲ್ಲಿ ಕರೆದೊಯ್ದು ಅದೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಪ್ರಯಾಣಿಕನನ್ನು ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಮಂಗಳೂರು ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರಿಗೆ ತರಾಟೆ: ಅಪಘಾತ ನಡೆದ ಸ್ಥಳಕ್ಕೆ ಸಂಚಾರ ಹಾಗೂ ಉಳ್ಳಾಲ ಠಾಣಾ ಪೊಲೀಸರು ಬರುವಾಗ ವಿಳಂಬವಾಗಿತ್ತು. ಇದನ್ನು ಖಂಡಿಸಿ ಸಾರ್ವಜನಿಕರು ಪೊಲೀಸರನ್ನು ತರಾಟೆಗೆ ತೆಗೆದುಕೊಂಡರು. ಬ್ಯಾರಿಕೇಡ್ ಅಳವಡಿಸುವಂತೆ ಹಲವು ಸಮಯದಿಂದ ಒತ್ತಾಯಿಸಿದ್ದರೂ ಸ್ಪಂದನೆ ಸಿಕ್ಕಿಲ್ಲ ಎಂದು ಆರೋಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.