ಉಳ್ಳಾಲ: ಪ್ಲಾಸ್ಟಿಕ್ ತ್ಯಾಜ್ಯ ಸಮಸ್ಯೆಯ ಬಗ್ಗೆ ಈಗಾಗಲೇ ಜಾಗೃತಿ ಮೂಡಿಸಲಾಗುತ್ತಿದ್ದರೂ ರಸ್ತೆ ಬದಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಎಸೆಯಲಾಗುತ್ತಿದೆ. ಕೊಣಾಜೆ ಗ್ರಾಮ ಪಂಚಾಯಿತಿ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಕಸ ಎಸೆಯುವವರ ವಿರುದ್ಧ ಎಫ್ಐಆರ್ ಹಾಗೂ ₹ 5 ಸಾವಿರ ದಂಡ ವಿಧಿಸಲಾಗುವುದು. ಪ್ಲಾಸ್ಟಿಕ್ ಎಸೆಯುವರನ್ನು ಪತ್ತೆಹಚ್ಚಿದವರಿಗೆ ಬಹುಮಾನ ನೀಡುವ ಯೋಜನೆ ರೂಪಿಸಲಾಗಿದೆ ಎಂದು ಕೊಣಾಜೆ ಪಿಡಿಒ ರಜನಿ ಹೇಳಿದರು.

ಮುಡಿಪುವಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ಕೊಣಾಜೆ ಗ್ರಾಮದ ನಡುಪದವಿನ ಸಸ್ಯೋದ್ಯಾನದ ಬಳಿ ನಡೆದ ಪ್ಲಾಸ್ಟಿಕ್ ತ್ಯಾಜ್ಯ ಸ್ವಚ್ಛತೆ ಹಾಗೂ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮುಖಂಡ ನಾಸಿರ್ ಕೆ.ಕೆ.ಎಸ್. ಮಾತನಾಡಿದರು.

ಮುಡಿಪು ಕಾಲೇಜಿನ ಎನ್ಎಸ್ಎಸ್ ಶಿಬಿರಾಧಿಕಾರಿ ತನುಜಾ ಮಾತನಾಡಿ, ಪರಿಸರ ಸ್ವಚ್ಛತೆಯ ಬಗ್ಗೆ ಸ್ವಯಂ ಜಾಗೃತಿ ಮೂಡಬೇಕಾಗಿದೆ ಎಂದರು.

ಕೊಣಾಜೆ ಪಂಚಾಯಿತಿ ಕಾರ್ಯದರ್ಶಿ ಚಿತ್ರಾ, ಮುಖಂಡರಾದ ಜಗದೀಶ್ ಆಳ್ವ ಕುವೆತ್ತಬೈಲ್, ಮಂಗಳೂರು ವಿವಿಯ ಗಿರೀಶ್ ಮಯ್ಯ, ನವೀನ್ ಚಂದ್ರ, ಸ್ಥಳೀಯರಾದ ಇಸ್ಮಾಯಿಲ್ ನಡುಪದವು, ಜಗದೀಶ್ ನಡುಪದವು, ಅಬ್ದುಲ್ ಅಝೀಜ್, ವಿಶು, ಅಶ್ರಫ್, ತಾರಾನಾಥ, ಹಸೈನಾರ್ ಕಲ್ಲರ್ಬೆ ಭಾಗವಹಿಸಿದ್ದರು.

ಪತ್ರಕರ್ತ ಸತೀಶ್ ಕೊಣಾಜೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶಿವಪ್ರಕಾಶ್ ಭಟ್ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-29-1931627241

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.