ಭಾನುವಾರ, ಜೂನ್ 7, 2020
28 °C

ಕೊಂಕಣಿ ಕಲಾವಿದರಿಗೆ ₹2 ಸಾವಿರ ಸಹಾಯಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಕೋವಿಡ್-19 ಪರಿಣಾಮ ಪೂರ್ಣ ಲಾಕ್‌ಡೌನ್‌ ಆಗಿರುವುದರಿಂದ ಕೊಂಕಣಿ ಭಾಷಿಕ ಬಡ ಕಲಾವಿದರು ಸಂಕಷ್ಟಕ್ಕೆ ಒಳಗಾಗಿದ್ದು, ಈ ಸಂದರ್ಭದಲ್ಲಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ಅರ್ಹ 138 ಫಲಾನುಭವಿಗಳನ್ನು ಗುರುತಿಸಿ ₹2 ಸಾವಿರ ಸಹಾಯಧನ ಒದಗಿಸಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಿ.ಟಿ. ರವಿ ಅವರ ಸಹಯೋಗದಿಂದ ಅರ್ಹ ಪ್ರತಿ ಬಡ ಕಲಾವಿದರಿಗೆ ಕೋವಿಡ್-19 ಪರಿಹಾರಾರ್ಥವಾಗಿ ಮೊದಲ ಹಂತದಲ್ಲಿ ಸಹಾಯಧನ ₹ 2 ಸಾವಿರ ಮೊತ್ತವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ.

ಈ ಸಂಕಷ್ಟದ ಸಮಯದಲ್ಲಿ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಮಾನವೀಯತೆ ಮೆರೆದಿದೆ. ಸಹಕಾರ ನೀಡಿದ ಸಚಿವ ಸಿ.ಟಿ ರವಿ, ಇಲಾಖೆಯ ಪ್ರಧಾನ ಕಾರ್ಯದರ್ಶಿ ಜನ್ನು, ನಿರ್ದೇಶಕರಾದ ಎಸ್. ರಂಗಪ್ಪ, ರಾಜೇಶ್, ರಿಜಿಸ್ಟ್ರಾರ್ ಕುಮಾರ್ ಬೆಕ್ಕೇರಿ ಹಾಗೂ ಸದಸ್ಯರಿಗೆ ಅಭಿನಂದನೆ ಸಲ್ಲಿಸುವುದಾಗಿ ಅಕಾಡೆಮಿ ಅಧ್ಯಕ್ಷ ಡಾ.ಜಗದೀಶ್‌ ಪೈ ತಿಳಿಸಿದ್ದಾರೆ.

ಈಗಾಗಲೇ ಇನ್ನಷ್ಟು ಬಡ ಕಲಾವಿದರಿಂದ ಬೇಡಿಕೆ ಬಂದಿರುವ ಹಿನ್ನೆಲೆಯಲ್ಲಿ ಇನ್ನೊಂದು ಹಂತದಲ್ಲಿ ಅರ್ಹ ಫಲಾನುಭವಿಗಳ ಬಗ್ಗೆ ಪರಿಶೀಲಿಸಿ ಹಣ ಬಿಡುಗಡೆ ಮಾಡುವ ಕುರಿತು ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು