ಮಂಗಳೂರು: ನಗರದ ನಂದಿಗುಡ್ಡೆಯ ಕೊರಗಜ್ಜನ ಕಟ್ಟೆಗೆ, ಬಳಸಿದ ಕಾಂಡೋಮ್ ಹಾಕಿ ಅಪವಿತ್ರಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಒಬ್ಬ ಆರೋಪಿಯನ್ನು ಬುಧವಾರ ಬಂಧಿಸಿದ್ದಾರೆ.
ದೇವದಾಸ್ ದೇಸಾಯಿ (62) ಬಂಧಿತ ಆರೋಪಿ. ಹುಬ್ಬಳ್ಳಿಯ ಉಣಕಲ್ ಮೂಲದ ದೇವದಾಸ್, ಕಳೆದ ಹಲವು ವರ್ಷಗಳಿಂದ ಮಂಗಳೂರಿನ ಕೋಟೆಕಾರ್‌ನಲ್ಲಿ ನೆಲೆಸಿದ್ದು, ಆಟೊ ಓಡಿಸುವುದೂ ಸೇರಿದಂತೆ ಬೇರೆಬೇರೆ ಕೆಲಸಗಳನ್ನು ಮಾಡಿಕೊಂಡಿದ್ದರು.
ಕೊರಗಜ್ಜನ ಕಟ್ಟೆ ಮಾತ್ರವಲ್ಲದೆ ನಗರದ ಬೇರೆಬೇರೆ ಧರ್ಮೀಯರ, 18 ಧಾರ್ಮಿಕ ಕ್ಷೇತ್ರಗಳಲ್ಲಿ ಇಂಥ ಕೃತ್ಯ ನಡೆಸಿರುವುದಲ್ಲದೆ, ಇಂಥ ಕಡೆಗಳಲ್ಲೆಲ್ಲ ಏಸುವನ್ನು ಕುರಿತ ಲೇಖನಗಳನ್ನೂ ಹಾಕಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆಆರೋಪಿಗಳನ್ನು ಬಂಧಿಸಲುವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಒತ್ತಾಯಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.