ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಂಜಾರಿನಲ್ಲಿ ಕೋಸ್ಟ್ ಗಾರ್ಡ್: ಸಚಿವ ಕೋಟ ಶ್ರೀನಿವಾಸ ಪೂಜಾರಿ

Last Updated 26 ಜನವರಿ 2021, 7:21 IST
ಅಕ್ಷರ ಗಾತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ 72ನೇ ಗಣರಾಜ್ಯೋತ್ಸವು‌ ಮಂಗಳವಾರ ನಗರದ ನೆಹರೂ ಮೈದಾನದಲ್ಲಿ ನಡೆಯಿತು‌.

ಧ್ವಜಾರೋಹಣ ಮಾಡಿ ಗಣರಾಜ್ಯೋತ್ಸವದ ಸಂದೇಶ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲೆಯ ಅಭಿವೃದ್ಧಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಅನೇಕ ಜನೋಪಯೋಗಿ ಯೋಜನೆಗಳನ್ನು ಕೈಗೆತ್ತಿಕೊಂಡಿವೆ. ಆ ಪೈಕಿ ದೇಶದ ಮೊದಲ ಕೋಸ್ಟ್‌ಗಾರ್ಡ್ ಅಕಾಡಮಿಯು ಬಜ್ಪೆ ಕೆಂಜಾರಿನಲ್ಲಿ ಸ್ಥಾಪನೆಯಾಗಲಿದೆ. ಅದಕ್ಕಾಗಿ ಕೇಂದ್ರ ಸರ್ಕಾರವು ₹1 ಸಾವಿರ ಕೋ. ಅನುದಾನ ಬಿಡುಗಡೆ ಮಾಡಿದೆ ಎಂದರು.

ಹಳೆ ಕೇಂದ್ರ ಮಾರುಕಟ್ಟೆ ಜಾಗದಲ್ಲಿ ₹144 ಕೋ. ವೆಚ್ಚದಲ್ಲಿ 11 ಅಂತಸ್ತಿನ ಮಾರುಕಟ್ಟೆ ನಿರ್ಮಾಣ ಹಾಗೂ ₹22 ಕೋ. ವೆಚ್ಚದಲ್ಲಿ ಎಮ್ಮೆಕೆರೆಯಲ್ಲಿ ಅಂತರರಾಷ್ಟ್ರೀಯ ಮಟ್ಟದ ಈಜುಕೊಳ, ಪಂಪ್ ವೆಲ್‌ನಲ್ಲಿ ₹445 ಕೋ. ವೆಚ್ಚದಲ್ಲಿ ಕೇಂದ್ರ ಬಸ್‌ ನಿಲ್ದಾಣ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ ಎಂದರು.

ಬಹು-ಗ್ರಾಮ ಕುಡಿಯುವ ನೀರಿನ ಯೋಜನೆಯ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿವೆ. ವಸತಿ ಇಲಾಖೆಯಡಿ 1,173 ಮನೆಗಳು ಪೂರ್ಣಗೊಂಡಿದ್ದು, 5,744 ಮನೆಗಳ ಕಾಮಗಾರಿಗಳು ಪ್ರಗತಿಯಲ್ಲಿವೆ. ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯಡಿ 2021 ರಲ್ಲಿ 1,586 ಸಂಪರ್ಕಮಾಡಲಾಗಿದೆ' ಎಂದರು.

ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ, ಪೊಲೀಸ್ ಆಯುಕ್ತ ಶಶಿಕುಮಾರ್, ಶಾಸಕರಾದ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಮೇಯರ್ ದಿವಾಕರ್ ಪಾಂಡೇಶ್ವರ, ಮಂಗಳೂರು ತಾಲ್ಲೂಕು ಪಂಚಾಇತಿ ಅಧ್ಯಕ್ಷ ಮಹಮ್ಮದ್ ಮೋನು, ಮೀನುಗಾರಿಕಾ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಕರ್ನಾಟಕ ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರವೀಂದ್ರ ಶೆಟ್ಟಿ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT