ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೆಜ್ಜೆಗಿರಿ ಕ್ಷೇತ್ರದಲ್ಲಿ ಉಗ್ರಾಣ ಮುಹೂರ್ತ

ನಂದನ ಬಿತ್ತಿಲು: ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ನೇಮೋತ್ಸವಕ್ಕೆ ಚಾಲನೆ ತೋರಣ ಮುಹೂರ್ತ
Last Updated 24 ಫೆಬ್ರುವರಿ 2020, 14:06 IST
ಅಕ್ಷರ ಗಾತ್ರ

ಪುತ್ತೂರು: ಗೆಜ್ಜೆಗಿರಿ ನಂದನ ಬಿತ್ತಿಲು ಕ್ಷೇತ್ರದಲ್ಲಿ ಎಂಟು ದಿನ ನಡೆಯಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ಮೂಲಸ್ಥಾನ ಗರಡಿ ನೇಮೋತ್ಸವಕ್ಕೆ ಸೋಮವಾರ ಚಾಲನೆ ನೀಡಲಾಯಿತು. ಭಕ್ತರ ಸಂಖ್ಯೆ ಹೆಚ್ಚತೊಡಗಿದ್ದು, ದೇಯಿ ಬೈದ್ಯೆತಿ, ಕೋಟಿ ಚೆನ್ನಯರ ಮೂಲಸ್ಥಾನದಲ್ಲಿ ಸಂಭ್ರಮ ಮನೆಮಾಡಿದೆ.

ಸೋಮವಾರ ಬೆಳಿಗ್ಗೆ ಕ್ಷೇತ್ರದ ತಂತ್ರಿ ಎಂ.ಕೆ. ಲೋಕೇಶ್ ಶಾಂತಿ ಮತ್ತು ಅರ್ಚಕ ವೃಂದದವರನ್ನು ಮೂಲಕ ಕ್ಷೇತ್ರಕ್ಕೆ ಬರಮಾಡಿಕೊಳ್ಳಲಾಯಿತು. ಚೆಂಡೆ, ವಾದ್ಯ, ಕೊಂಬು, ಕಹಳೆಗಳ ಮೂಲಕ, ಸುಮಂಗಲಿಯರ ಪುಷ್ಪಾರ್ಚನೆ ನಡೆಯಿತು. ಕ್ಷೇತ್ರದ ಆದಿ ದೈವ ಧೂಮಾವತಿ ಸಾನಿಧ್ಯದ ಎದುರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಬಳಿಕ ತೋರಣ ಮುಹೂರ್ತ ನಡೆಯಿತು.

ಉಗ್ರಾಣ ಮುಹೂರ್ತ: ಬೆಳಿಗ್ಗೆ 11 ಗಂಟೆಗೆ ಉಗ್ರಾಣ ಮುಹೂರ್ತ ನಡೆಯಿತು. ಆನುವಂಶಿಕ ಮೊಕ್ತೇಸರರಾದ ಮಾತೃಶ್ರೀ ಲೀಲಾವತಿಯಮ್ಮ, ಪ್ರಗತಿಪರ ಕೃಷಿಕ ಗುಂಡ್ಯಡ್ಕ ವಾಸು ಪೂಜಾರಿ ಮತ್ತು ಪುತ್ತೂರು ತಾಲ್ಲೂಕು ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಎಂ. ವರದರಾಜ್ ಉಪ್ಪಿನಂಗಡಿ ದೀಪ ಪ್ರಜ್ವಲನೆ ಮಾಡಿದರು.

ಕ್ಷೇತ್ರದ ಯಜಮಾನ ಶ್ರೀಧರ ಪೂಜಾರಿ, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಜಯಂತ ನಡುಬೈಲ್, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಪೀತಾಂಬರ ಹೇರಾಜೆ, ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ. ರಾಜಶೇಖರ ಕೋಟ್ಯಾನ್, ಮಾತೃಶ್ರೀ ಲೀಲಾವತಿಯಮ್ಮ, ಪದ್ಮನಾಭ ಸುವರ್ಣ, ರವೀಂದ್ರ ಸುವರ್ಣ, ಮಹಾಬಲ ಪೂಜಾರಿ, ಕ್ಷೇತ್ರಾಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ರವಿ ಪೂಜಾರಿ ಚಿಲಿಂಬಿ, ಕಾರ್ಯದರ್ಶಿಗಳಾದ ಸುಧಾಕರ ಸುವರ್ಣ, ಉಲ್ಲಾಸ್ ಕೋಟ್ಯಾನ್, ಕೋಶಾಧಿಕಾರಿ ದೀಪಕ್ ಕೋಟ್ಯಾನ್, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ನಾರಾಯಣ ಪೂಜಾರಿ ಮಡ್ಯಂಗಳ, ಪ್ರಧಾನ ಕಾರ್ಯದರ್ಶಿ ಯಶವಂತ ದೇರಾಜೆ ಗುತ್ತು, ಧೂಮಾವತಿ ಕರಸೇವಾ ಸಮಿತಿಯ ಅಧ್ಯಕ್ಷ ಉದಯ ಕುಮಾರ್ ಕೋಲಾಡಿ ಉಪಸ್ಥಿತರಿದ್ದರು.

ಸಂಜೆ ವೈದಿಕ ಕಾರ್ಯಕ್ರಮಗಳಲ್ಲಿ ಆಲಯ ಪರಿಗ್ರಹ, ಸಪ್ತಶುದ್ಧಿ, ಬಿಂಬ ಶುದ್ಧಿ, ಪ್ರಾಸಾದ ಶುದ್ಧಿ, ರಾಕ್ಷೊಘ್ನ ಹೋಮ, ವಾಸ್ತುಹೋಮ, ವಾಸ್ತುಬಲಿ, ಪ್ರಾಕಾರ ಬಲಿ ಇತ್ಯಾದಿ ಕಾರ್ಯಕ್ರಮಗಳು ನಡೆದವು.

ಸಾಂಸ್ಕೃತಿಕ ಕಾರ್ಯಕ್ರಮ: ಇದೇ 25ರಂದು ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ. ಮೂಡುಬಿದರೆಯ ಅಯ್ಯಪ್ಪ ದೇವಸ್ಥಾನದ ಮೊಕ್ತೇಸರ ಸುದರ್ಶನ್ ಎಂ. ಮತ್ತು ಪುತ್ತೂರು ರಾಮಕೃಷ್ಣ ಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ ಉದ್ಘಾಟಿಸುವರು. ಉಳ್ಳಾಲದ ನೃತ್ಯ ಸೌರಭ ನಾಟ್ಯಾಲಯದವರಿಂದ ‘ಬ್ರಹ್ಮಶ್ರೀ ನಾರಾಯಣ ಗುರು’ ನೃತ್ಯರೂಪಕ ಪ್ರದರ್ಶನಗೊಳ್ಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT