ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳೂರು: ಫೆ.21ಕ್ಕೆ ಕೆಆರ್‌ಎಸ್ ಜಾಥಾ

Published 16 ಫೆಬ್ರುವರಿ 2024, 2:55 IST
Last Updated 16 ಫೆಬ್ರುವರಿ 2024, 2:55 IST
ಅಕ್ಷರ ಗಾತ್ರ

ಮಂಗಳೂರು: ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷವು ಹಮ್ಮಿಕೊಂಡಿರುವ ‘ಕರ್ನಾಟಕಕ್ಕಾಗಿ ನಾವು’ ಜನಜಾಗೃತಿ ಬೈಕ್ ಜಾಥಾವು ಫೆ.21ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದೆ ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ವೇಣುಗೋಪಾಲ ಹೇಳಿದರು.

ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಭ್ರಷ್ಟಾಚಾರ, ದುರಾಡಳಿತದ ಮೂಲಕ ರಾಜ್ಯದ ಜನರಿಗೆ ದ್ರೋಹ ಮಾಡುತ್ತಿರುವ ರಾಷ್ಟ್ರೀಯ ಪಕ್ಷಗಳ ವಿರುದ್ಧ ಕೆಆರ್‌ಎಸ್‌ ಪಕ್ಷವು ಫೆ.19ರಿಂದ ಮಾರ್ಚ್ 2ರವರೆಗೆ ರಾಜ್ಯವ್ಯಾಪಿ ಬೈಕ್ ಜಾಥಾ ಹಮ್ಮಿಕೊಂಡಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ರವಿ ಕೃಷ್ಣಾರೆಡ್ಡಿ ನೇತೃತ್ವದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಿಂದ ಆರಂಭವಾಗಲಿರುವ ಜಾಥಾವು ರಾಜ್ಯದ 31 ಜಿಲ್ಲೆಗಳಲ್ಲಿ ಸಂಚರಿಸಲಿದೆ. ಮಾ. 2ರಂದು ನೆಲಮಂಗಲದಲ್ಲಿ ಸಮಾರೋಪ ಸಮಾವೇಶ ನಡೆಯಲಿದೆ‘ ಎಂದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಎಲ್ಲ 28 ಕ್ಷೇತ್ರಗಳಲ್ಲಿ ಕೆಆರ್‌ಎಸ್‌ ಪಕ್ಷ ಸ್ಪರ್ಧಿಸಲಿದೆ. ನಂತರ ನಡೆಯುವ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಸಹ ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂದು ಹೇಳಿದರು.

ಪಕ್ಷದ ಪ್ರಮುಖರಾದ ವಿಶ್ವನಾಥ್, ನಮಿತಾ, ಸುನೀತಾ ರೊಸಾರಿಯೊ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT