ಬುಧವಾರ, ಅಕ್ಟೋಬರ್ 28, 2020
28 °C

ಕಾಸರಗೋಡು–ಮಂಗಳೂರು ನಡುವೆ ಇದೇ 21ರಿಂದ ಬಸ್‌ ಸಂಚಾರ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

KSRTC

ಮಂಗಳೂರು: ಕಾಸರಗೋಡು-ಮಂಗಳೂರು ನಡುವೆ ಇದೇ 21ರಿಂದ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭಗೊಳ್ಳಲಿದೆ. ಈ ಬಗ್ಗೆ ಇದೀಗ ಆದೇಶ ಹೊರಡಿಸಲಾಗಿದೆ.

ಮಾರ್ಚ್‌ನಿಂದ ಅಂತರ ರಾಜ್ಯ ಬಸ್ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಜೊತೆಗೆ ಗಡಿ ರಸ್ತೆಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿತ್ತು. ಈಗಾಗಲೇ ಉಭಯ ಜಿಲ್ಲಾಡಳಿತಗಳ ಆದೇಶದ ಬಳಿಕ ಕೆಲವು ಪ್ರಮುಖ ಗಡಿಗಳನ್ನು ತೆರವುಗೊಳಿಸಿ ಅಂತರ ರಾಜ್ಯ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದೀಗ ಮಂಗಳೂರು-ಕಾಸರಗೋಡು ಜಿಲ್ಲೆಗಳ ನಡುವೆ ಕೆಎಸ್ಆರ್‌ಟಿಸಿ. ಬಸ್ ಸಂಚಾರಕ್ಕೆ ಒಪ್ಪಿಗೆ ನೀಡಲಾಗಿದೆ.

ಆನ್ ಲೈನ್ ಮೂಲಕ ಟಿಕೆಟ್ ಬುಕ್ಕಿಂಗ್‌ಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಬಸ್ ಸಂಚಾರ ನಡೆಸಲಿವೆ. ಒಂದು ಬಸ್‌ನಲ್ಲಿ 40 ಮಂದಿ ಇದ್ದಲ್ಲಿ ಮಾತ್ರವೇ ಸಂಚಾರ ನಡೆಸಲಿದೆ. ಮೊದಲ ಹಂತದಲ್ಲಿ ಕಾಸರಗೋಡು-ಮಂಗಳೂರು ಹಾಗೂ ಕಾಸರಗೋಡು-ಪಂಜಿಕ್ಕಲ್ ರಸ್ತೆಗಳಲ್ಲಿ ಮಾತ್ರ ಬಸ್ ಸಂಚಾರ ಆರಂಭಿಸಲಾಗುವುದು ಎಂದು ತಿಳಿದು ಬಂದಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು